IND vs AUS T20 Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ಅವರಿಗೆ ನೀಡಲಾಗಿದೆ.

India vs Australia T20 Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ಅವರಿಗೆ ವಹಿಸಲಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಯು ನವೆಂಬರ್ 23 ರಿಂದ ಪ್ರಾರಂಭವಾಗಲಿದೆ. ಹಾರ್ದಿಕ್ ಪಾಂಡ್ಯ ಗಾಯದಿಂದ ಬಳಲುತ್ತಿರುವ ಕಾರಣ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ.
ಈ ದಿಗ್ಗಜನಿಗೆ ಟೀಂ ಇಂಡಿಯಾ ನಾಯಕತ್ವ :
ನವೆಂಬರ್ 23ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಸೋಮವಾರ ನೇಮಿಸಲಾಗಿದೆ. ಉಪನಾಯಕರಾಗಿ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಅವರಿಗೆ ವಹಿಸಲಾಗಿದೆ.
ಮೊದಲ 3 ಪಂದ್ಯಗಳಿಂದ ಶ್ರೇಯಸ್ ಅಯ್ಯರ್ ಔಟ್:
ಭಾರತವು ಟಿ20 ಸರಣಿಗಾಗಿ ವಿಶ್ವಕಪ್ ತಂಡದಲ್ಲಿದ್ದ ಮೂವರು ಆಟಗಾರರನ್ನು ಮಾತ್ರ ಆಯ್ಕೆ ಮಾಡಿದೆ. ಇದರಲ್ಲಿ ಪ್ರಸಿದ್ಧ್ ಕೃಷ್ಣ, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ರಾಯ್‌ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ20 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ತಂಡವನ್ನು ಸೇರಿಕೊಳ್ಳಲಿದ್ದು, ಗಾಯಕ್‌ವಾಡ್ ಬದಲಿಗೆ ಅವರು ಉಪನಾಯಕನ ಪಾತ್ರವನ್ನು ವಹಿಸಲಿದ್ದಾರೆ.
ಟಿ20 ಸರಣಿಗೆ ಭಾರತ ತಂಡ : ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಆರ್ಷದೀಪ್ ಸಿಂಗ್, ಪ್ರಸಿದ್ಧ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.
ಭಾರತ vs ಆಸ್ಟ್ರೇಲಿಯಾ T20 ಸರಣಿ ದಿನಾಂಕ ಮತ್ತು ಸಮಯ :
1ನೇ ಟಿ20 ಪಂದ್ಯ – 23 ನವೆಂಬರ್, ಸಂಜೆ 7.00, ವಿಶಾಖಪಟ್ಟಣ
2ನೇ ಟಿ20 ಪಂದ್ಯ – 26 ನವೆಂಬರ್, ಸಂಜೆ 7.00, ತಿರುವನಂತಪುರ
3ನೇ ಟಿ20 ಪಂದ್ಯ – 28 ನವೆಂಬರ್, ಸಂಜೆ 7.00, ಗುವಾಹಟಿ
4ನೇ ಟಿ20 ಪಂದ್ಯ – 1 ಡಿಸೆಂಬರ್, ಸಂಜೆ 7.00, ನಾಗ್ಪುರ
5ನೇ ಟಿ20 ಪಂದ್ಯ – 3 ಡಿಸೆಂಬರ್, ಸಂಜೆ 7.00, ಹೈದರಾಬಾದ್
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1