Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • Team India Schedule: ಮುಗಿಯಿತು ಟೆಸ್ಟ್ ಚಾಂಪಿಯನ್​ಶಿಪ್: ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?
Sports

Team India Schedule: ಮುಗಿಯಿತು ಟೆಸ್ಟ್ ಚಾಂಪಿಯನ್​ಶಿಪ್: ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?

June 13, 2023
samagrasuddi

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಮುಕ್ತಾಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತ ಭಾರತ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ತವರಿಗೆ ಹಿಂತಿರುಗುತ್ತಿದ್ದಾರೆ.ಐಪಿಎಲ್ 2023 ಹಾಗೂ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹೀಗೆ ಸತತ ಕ್ರಿಕೆಟ್ ಆಡಿ ಸುಸ್ತಾಗಿರುವ ಭಾರತೀಯ ಆಟಗಾರರು ಸುಮಾರು ಒಂದು ತಿಂಗಳುಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಅಂದರೆ ಮುಂದಿನ 30 ದಿನಗಳ ಕಾಲ ಭಾರತಕ್ಕೆ ಯಾವುದೇ ಕ್ರಿಕೆಟ್ ಪಂದ್ಯವಿಲ್ಲ.ಟೀಮ್ ಇಂಡಿಯಾ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ನರ ನಾಡಿಗೆ ಭಾರತ ಪ್ರವಾಸ ಬೆಳೆಸಲಿದ್ದು, ಜುಲೈ 12 ರಿಂದ ವಿಂಡೀಸ್​ ವಿರುದ್ದ 2 ಟೆಸ್ಟ್, 3 ಏಕದಿನ, 5 ಟಿ-ಟ್ವಿಂಟಿ ಪಂದ್ಯಗಳ ಸರಣಿಯನ್ನು ಆಡಲಿದೆ.ಟೀಮ್​ ಇಂಡಿಯಾದ ವೆಸ್ಟ್ ಇಂಡೀಸ್‌ ಪ್ರವಾಸವು ಎರಡು ಟೆಸ್ಟ್‌ಗಳೊಂದಿಗೆ ಪ್ರಾರಂಭವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಜುಲೈ 12ರಿಂದ 16 ರವರೆಗೆ ಮೊದಲ ಟೆಸ್ಟ್ ಆಯೋಜಿಸಲಾಗಿದೆ. ಅಂತೆಯೆ ಜುಲೈ 20 ರಿಂದ 24 ರವರೆಗೆ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.ನಂತರ ಮೂರು ಏಕದಿನ ಪಂದ್ಯಗಳ ಸರಣಿಯು ನಡೆಯಲಿದೆ. ಜುಲೈ 27 ಮತ್ತು 29 ರಂದು ಮೊದಲ ಮತ್ತು ಎರಡು ಏಕದಿನ ಪಂದ್ಯಗಳು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಹಾಗೂ ಮೂರನೇ ಏಕದಿನ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಆಯೋಜಿಸಲಾಗಿದೆ.ಕೊನೆಯದಾಗಿ ಟಿ20 ಸರಣಿಯು ಆರಂಭಗೊಳ್ಳಲಿದ್ದು, ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಮೊದಲ ಪಂದ್ಯವಿದೆ. ನಂತರ ಆಗಸ್ಟ್ 6 ಮತ್ತು 8 ರಂದು ಎರಡು ಮತ್ತು ಮೂರನೇ ಟಿ20, ಆಗಸ್ಟ್ 12 ರಂದು 4ನೇ ಪಂದ್ಯ, 5 ನೇ ಹಾಗೂ ಅಂತಿಮ ಪಂದ್ಯದ ಆ. 13 ರಂದು ಆಡಲಿದೆ.

source https://tv9kannada.com/photo-gallery/cricket-photos/india-vs-west-indies-here-is-the-team-indias-next-series-schedule-vb-599887.html

Tags: Cricket, samagrasuddi, ಸಮಗ್ರ ಸುದ್ದಿ

Post navigation

ವಿಶ್ವಕಪ್​ಗಿಂತ ಐಪಿಎಲ್​ ಟ್ರೋಫಿ ಗೆಲ್ಲುವುದು ಕಷ್ಟ, ರೋಹಿತ್ ಶರ್ಮಾ ಬೆಸ್ಟ್ ಕ್ಯಾಪ್ಟನ್: ಸೌರವ್ ಗಂಗೂಲಿ
Arshdeep Singh: ಕೌಂಟಿ ಕ್ರಿಕೆಟ್​ನಲ್ಲಿ ಚೊಚ್ಚಲ ವಿಕೆಟ್ ಕಿತ್ತ ಅರ್ಶ್​ದೀಪ್ ಸಿಂಗ್: ಔಟ್ ಮಾಡಿದ್ದು ಯಾರನ್ನ ಗೊತ್ತೇ?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress