Skip to content
  • Tuesday, March 24, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • Team India: ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಹೀಗಿದೆ
Sports

Team India: ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಹೀಗಿದೆ

May 30, 2023
samagrasuddi

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2023) ತೆರೆ ಬಿದ್ದಿದೆ. ಸೋಮವಾರ ಅಹಮದಾಬಾದ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ (CSK) ಚಾಂಪಿಯನ್​ ಪಟ್ಟಕ್ಕೇರಿದೆ. ಇದರೊಂದಿಗೆ ಐಪಿಎಲ್ ಸೀಸನ್ 16 ಗೂ ತೆರೆಬಿದ್ದಂತಾಗಿದೆ.
ಐಪಿಎಲ್​ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಆಟಗಾರರು ಇಂಗ್ಲೆಂಡ್​ನತ್ತ ಪ್ರಯಾಣಿಸಲಿದ್ದಾರೆ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದೊಂದಿಗೆ ಮತ್ತೆ ಭಾರತದ ಸರಣಿ ಶುರುವಾಗಲಿದೆ. ಹಾಗಿದ್ರೆ ಟೀಮ್ ಇಂಡಿಯಾದ ಮುಂದಿರುವ ಪ್ರಮುಖ ಪಂದ್ಯಗಳಾವುವು ಎಂಬುದನ್ನು ನೋಡೋಣ... 
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ಪಂದ್ಯವು ಜೂ.7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಡೆಯಲಿರುವ ಟೆಸ್ಟ್ ಕ್ರಿಕೆಟ್​ನ ಫೈನಲ್ ಫೈಟ್​ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಅಂದರೆ ಟೀಮ್ ಇಂಡಿಯಾದ ಮುಂದಿನ ಎದುರಾಳಿ ಕೂಡ ಆಸ್ಟ್ರೇಲಿಯಾ ತಂಡ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಕಠಿಣ ಪೈಪೋಟಿ ಎದುರಿಸುವುದು ಖಚಿತ.ಇದಾದ ಬಳಿಕವಷ್ಟೇ ಟೀಮ್ ಇಂಡಿಯಾ ಮುಂದಿನ ಸರಣಿಗಳನ್ನು ಆಡಲಿದೆ. ಭಾರತ ಕ್ರಿಕೆಟ್​ ತಂಡದ ವಾರ್ಷಿಕ ವೇಳಾಪಟ್ಟಿ ಪ್ರಕಾರ, ಜುಲೈನಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್​ ವಿರುದ್ಧ ಸರಣಿ ಆಡಲಿದೆ. ವೇಳಾಪಟ್ಟಿ ನಿಗದಿಯಾಗದ ಈ ಸರಣಿಯಲ್ಲಿ 2 ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ.ಇದರ ನಡುವೆ ಅಫ್ಘಾನಿಸ್ತಾನ್ ವಿರುದ್ಧ ಕೂಡ 3 ಪಂದ್ಯಗಳ ಏಕದಿನ ಸರಣಿ ಆಡಲಿದ್ದು, ಈ ಸರಣಿಯ ವೇಳಾಪಟ್ಟಿಯನ್ನು ಇನ್ನೂ ಕೂಡ ನಿರ್ಧರಿಸಿಲ್ಲ.
ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಮುಂದೆ ಏಷ್ಯಾಕಪ್ ಸವಾಲು ಎದುರಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಏಷ್ಯಾಕಪ್​ ವೇಳಾಪಟ್ಟಿ ಕೂಡ ನಿಗದಿಯಾಗಿಲ್ಲ. ಆದರೆ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್ ನಡೆಯುವುದು ಬಹುತೇಕ ಖಚಿತವಾಗಿದೆ.ಆ ಬಳಿಕ ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಮತ್ತೊಮ್ಮೆ ಆಗಮಿಸಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.ಇನ್ನು ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜರುಗಲಿದ್ದು, 2 ತಿಂಗಳುಗಳ ಕಾಲ 10 ತಂಡಗಳ ನಡುವೆ ಕ್ರಿಕೆಟ್ ಕದನ ನಡೆಯಲಿದೆ.ಇದಾದ ಬಳಿಕ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದರ ನಂತರ ಟೀಮ್ ಇಂಡಿಯಾ ಡಿಸೆಂಬರ್​ನಲ್ಲಿ ಸೌತ್ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಅಂದರೆ ಮುಂದಿನ ಆರೇಳು ತಿಂಗಳಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧವೇ ಹೆಚ್ಚಿನ ಪಂದ್ಯಗಳನ್ನು ಆಡುತ್ತಿರುವುದು ವಿಶೇಷ.

source https://tv9kannada.com/photo-gallery/cricket-photos/indian-team-schedule-2023-indias-next-match-schedule-2023-kannada-news-zp-590430.html

Post navigation

IPL 2023: CSK 5ನೇ ಬಾರಿ ಚಾಂಪಿಯನ್ಸ್​…ಗಂಭೀರ್ ಹೇಳಿದ್ದೇನು?
ಐಪಿಎಲ್ ಫೈನಲ್​​ನಲ್ಲಿ ಸಿಎಸ್​​ಕೆಗಾಗಿ ಗೆಲುವಿನ ರನ್ ದಾಖಲಿಸಿದ್ದು ಬಿಜೆಪಿ ಕಾರ್ಯಕರ್ತ ಜಡೇಜಾ ಎಂಬುದು ಹೆಮ್ಮೆ: ಅಣ್ಣಾಮಲೈ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress