ICC Champions Trophy 2025: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಕಳುಹಿಸಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ಬಗ್ಗೆ ಇದ್ದ ಅನುಮಾನಗಳಿಗೆ ತೆರೆಬಿದ್ದಿದೆ.
![](https://samagrasuddi.co.in/wp-content/uploads/2024/11/image-195-1024x576.png)
ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಕಳುಹಿಸಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ಬಗ್ಗೆ ಇದ್ದ ಅನುಮಾನಗಳಿಗೆ ತೆರೆಬಿದ್ದಿದೆ.
ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಅವರ ಬಳಿ ಐಸಿಸಿ ಪಂದ್ಯಾವಳಿಯನ್ನಾಡಲು ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಹೋಗಲಿದೆಯೇ ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ಭದ್ರತಾ ಕಾಳಜಿಯ ದೃಷ್ಟಿಯಿಂದ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಈ ಬಗ್ಗೆ ಈಗಾಗಲೇ ನಾವು ಬಿಸಿಸಿಐಗೆ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಈ ಹೇಳಿಕೆ ಹೊರಬಿದ್ದ ಬಳಿಕ ಐಸಿಸಿ ನಡೆಸುತ್ತಿರುವ ವರ್ಚುವಲ್ ಸಭೆಯ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಹಗ್ಗಜಗ್ಗಾಟಕ್ಕೆ ತೆರೆ ಎಳೆಯುವ ಸಲುವಾಗಿ ಐಸಿಸಿ ಈ ಸಭೆಯನ್ನು ಏರ್ಪಡಿಸಿದೆ. ಇದೀಗ ಈ ಸಭೆಗೂ ಮುನ್ನ ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟನೆ ನೀಡಿರುವುದರಿಂದ ಐಸಿಸಿ, ಈ ಸಮಸ್ಯೆಗೆ ಯಾವ ರೀತಿಯ ಪರಿಹಾರ ಕಂಡುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.