IND vs ZIM: 10 ವಿಕೆಟ್​ಗಳಿಂದ ಗೆದ್ದು ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ.

IND vs ZIM: ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಇಂದು ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 10 ವಿಕೆಟ್​ಗಳಿಂದ ಮಣಿಸಿದೆ. ಇದೇ ಮೈದಾನದಲ್ಲಿ ನಡೆದಿದ್ದ ಮೊದಲ ಮೂರು ಪಂದ್ಯಗಳಲ್ಲಿ 1 ರಲ್ಲಿ ಸೋತು ಎರಡರಲ್ಲಿ ಗೆದ್ದಿದ್ದ ಟೀಂ ಇಂಡಿಯಾ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಇಂದು ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 10 ವಿಕೆಟ್​ಗಳಿಂದ ಮಣಿಸಿದೆ. ಇದೇ ಮೈದಾನದಲ್ಲಿ ನಡೆದಿದ್ದ ಮೊದಲ ಮೂರು ಪಂದ್ಯಗಳಲ್ಲಿ 1 ರಲ್ಲಿ ಸೋತು ಎರಡರಲ್ಲಿ ಗೆದ್ದಿದ್ದ ಟೀಂ ಇಂಡಿಯಾ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ 28 ಎಸೆತಗಳನ್ನು ಇನ್ನು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ 3-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

152 ರನ್‌ಗಳ ಟಾರ್ಗೆಟ್

ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮಲ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಪರ ತಂಡದ ಆರಂಭಿಕರು ಉತ್ತಮ ಆರಂಭ ನೀಡಿದರು. ಆದರೆ ಈ ಆರಂಭವನ್ನು ದೊಡ್ಡ ಸ್ಕೋರ್‌ಗೆ ಕೊಂಡೊಯ್ಯಲು ತಂಡಕ್ಕೆ ಸಾಧ್ಯವಾಗಲಿಲ್ಲ. ಈ ಮೂಲಕ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು. ತಂಡದ ಪರ ನಾಯಕ ಸಿಕಂದರ್ ರಾಝಾ 46 ರನ್​ಗಳ ಇನ್ನಿಂಗ್ಸ್ ಆಡಿದರೆ, ತಡಿವಾನಾಶೆ ಮರುಮಣಿ 32 ರನ್​ಗಳ ಕಾಣಿಕೆ ನೀಡಿದರು. ಟೀಂ ಇಂಡಿಯಾ ಪರ ಖಲೀಲ್ ಅಹ್ಮದ್ 4 ಓವರ್‌ಗಳಲ್ಲಿ 32 ರನ್ ನೀಡಿ 2 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ, ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದರು.

ಭಾರತಕ್ಕೆ 10 ವಿಕೆಟ್ ಜಯ

153 ರನ್‌ಗಳ ಗುರಿಗೆ ಉತ್ತರವಾಗಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಿದರು. ಈ ಇಬ್ಬರೂ ಅಜೇಯ ಜೊತೆಯಾಟದ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಆರಂಭದಿಂದಲೇ ಯಶಸ್ವಿ ಜೈಸ್ವಾಲ್ ತುಂಬಾ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು ಮತ್ತು ಶುಭಮನ್ ಗಿಲ್ ಅವರಿಗೆ ಸಂಪೂರ್ಣ ಬೆಂಬಲ ನೀಡಿದರು. ಜೈಸ್ವಾಲ್ 53 ಎಸೆತಗಳಲ್ಲಿ ಅಜೇಯ 93 ರನ್ ಬಾರಿಸಿದರೆ, ಅವರ ಈ ಇನ್ನಿಂಗ್ಸ್‌ನಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಅದೇ ಸಮಯದಲ್ಲಿ, ನಾಯಕ ಗಿಲ್ 39 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡಂತೆ 58 ರನ್ ಸಿಡಿಸಿದರು.

ಟೀಂ ಇಂಡಿಯಾಗೆ ಸರಣಿ

ಈ ಪ್ರವಾಸದಲ್ಲ ಟೀಂ ಇಂಡಿಯಾಗೆ ಗೆಲುವಿನ ಶುಭಾರಂಭ ಮಾಡಲು ಸಾಧ್ಯವಾಗಲಿಲ್ಲ. ತಂಡ ತನ್ನ ಮೊದಲ ಪಂದ್ಯದಲ್ಲಿಯೇ ದೊಡ್ಡ ಸೋಲನ್ನು ಎದುರಿಸಬೇಕಾಯಿತು. ಆ ಪಂದ್ಯದಲ್ಲಿ ಭಾರತ ತಂಡ 102 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೆ ಇದರ ನಂತರ ಟೀಂ ಇಂಡಿಯಾ ಅದ್ಭುತ ಪುನರಾಗಮನ ಮಾಡಿ ಸತತ ಮೂರು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದೆ. ಇದೀಗ ಸರಣಿಯ ಕೊನೆಯ ಪಂದ್ಯ ಜುಲೈ 14 ರಂದು ನಡೆಯಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಪ್ರವಾಸವನ್ನು ಅಂತ್ಯಗೊಳಿಸುವ ಇರಾದೆಯಲ್ಲಿ ಶುಭ್​ಮನ್ ಗಿಲ್ ಪಡೆ ಇದೆ.

Source: https://tv9kannada.com/sports/cricket-news/ind-vs-zim-4th-t20i-india-beat-zimbabwe-by-10-wickets-and-clinch-the-series-psr-865799.html

Leave a Reply

Your email address will not be published. Required fields are marked *