ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಕಾರಿಗೆ ಕ್ಯಾಂಟರ್ ಡಿಕ್ಕಿ: ಭೀಕರ ಅಪಘಾತದಿಂದ ಸ್ಥಿತಿ ಗಂಭೀರ!

Team India Cricketer Car Accident: ಸ್ವಿಂಗ್ ಬೌಲರ್ ಪ್ರವೀಣ್ ಕುಮಾರ್ ಅವರ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ವೇಗದ ಬೌಲರ್ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಕಾರಿನೊಳಗೆ ಇದ್ದರು ಎಂದು ತಿಳಿದುಬಂದಿದೆ.

Team India Cricketer Car Accident: ಭಾರತದ ಹಿರಿಯ ಕ್ರಿಕೆಟಿಗರೊಬ್ಬರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಭಾರತದ ಈ ಡ್ಯಾಶಿಂಗ್ ಕ್ರಿಕೆಟಿಗನ ಪ್ರಾಣಕ್ಕೆ ಅಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಆಡಿದ್ದ ಭಾರತದ ಸ್ವಿಂಗ್ ಬೌಲರ್ ಪ್ರವೀಣ್ ಕುಮಾರ್ ಅವರ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ವೇಗದ ಬೌಲರ್ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಕಾರಿನೊಳಗೆ ಇದ್ದರು ಎಂದು ತಿಳಿದುಬಂದಿದೆ.

ಘಟನೆಯ ನಂತರ ಸ್ಥಳದಲ್ಲೇ ಇದ್ದ ಪ್ರತ್ಯಕ್ಷದರ್ಶಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮತ್ತೊಂದೆಡೆ ಕ್ಯಾಂಟರ್ ಚಾಲಕನನ್ನು ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

36 ವರ್ಷದ ಪ್ರವೀಣ್ ಕುಮಾರ್ ತಮ್ಮ ಸ್ವಿಂಗ್‌ ಬೌಲಿಂಗ್’ನಿಂದ ಟೀಂ ಇಂಡಿಯಾದಲ್ಲಿ ಭಾರೀ ಹೆಸರು ಮಾಡಿದ್ದರು. ಟೆಸ್ಟ್, ಏಕದಿನ ಮತ್ತು T20 ಅಂತರಾಷ್ಟ್ರೀಯ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತಕ್ಕಾಗಿ ಆಡಿದ್ದಾರೆ. ಪ್ರವೀಣ್ ಕುಮಾರ್ ಭಾರತದ ಪರ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಮತ್ತು 10 T20 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ. ಕೇವಲ 26 ನೇ ವಯಸ್ಸಿನಲ್ಲಿ, ಈ ಡ್ಯಾಶಿಂಗ್ ಕ್ರಿಕೆಟಿಗನ ಅಂತರರಾಷ್ಟ್ರೀಯ ವೃತ್ತಿಜೀವನವು ಕೊನೆಗೊಂಡಿತ್ತು.

ಮಾಹಿತಿ ಪ್ರಕಾರ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಸುರಕ್ಷಿತವಾಗಿದ್ದಾರೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಬಾಗ್‌ಪತ್ ರಸ್ತೆಯ ಮುಲ್ತಾನ್ ನಗರದ ನಿವಾಸಿಯಾಗಿದ್ದ ಪ್ರವೀಣ್ ಕುಮಾರ್ ತಮ್ಮ ಡಿಫೆಂಡರ್ ವಾಹನದಲ್ಲಿ ಪಾಂಡವ್ ನಗರದಿಂದ ಬರುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಮಾಹಿತಿ ಪ್ರಕಾರ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಸುರಕ್ಷಿತವಾಗಿದ್ದಾರೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಬಾಗ್‌ಪತ್ ರಸ್ತೆಯ ಮುಲ್ತಾನ್ ನಗರದ ನಿವಾಸಿಯಾಗಿದ್ದ ಪ್ರವೀಣ್ ಕುಮಾರ್ ತಮ್ಮ ಡಿಫೆಂಡರ್ ವಾಹನದಲ್ಲಿ ಪಾಂಡವ್ ನಗರದಿಂದ ಬರುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

Source : https://zeenews.india.com/kannada/sports/former-indian-cricketer-praveen-kumar-survived-from-a-horrific-car-accident-143654

Leave a Reply

Your email address will not be published. Required fields are marked *