3 ತಿಂಗಳಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ವರದಿ ನೀಡಲು ಸೂಚನೆ ನೀಡಲಾಗಿದೆ. 2024-25ನೇ ಸಾಲಿನಿಂದ ಪರಿಷ್ಕೃತ ಪಠ್ಯ ಜಾರಿಗೆ ತರಲು ರಾಜ್ಯ ಸರ್ಕಾರದಿಂದ ಸಿದ್ಧತೆ ಆರಂಭವಾಗಿದೆ.

ಪಠ್ಯ ಪರಿಷ್ಕರಣೆಯ ಬಗ್ಗೆ ಹಲವಾರು ದಿನಗಳಿಂದ ವಾದ ವಿವಾದಗಳು ನಡೆಯುತ್ತಿದ್ದವು ಇದೀಗ ಆ ಕುರಿತು ಹೊಸದೊಂದು ವಿಚಾರ ಹೊರಬಿದ್ದಿದೆ. ಅದರ ವಿವರಣೆಯನ್ನು ನಾವಿಲ್ಲಿ ನೀಡಿದ್ದೇವೆ ಗಮನಿಸಿ.

ಪಠ್ಯ ಪರಿಷ್ಕರಣೆಗೆ ಹೊಸ ತಜ್ಞರ ಸಮಿತಿಯನ್ನು ರಚಿಸಲು ಸರ್ಕಾರ ಇದೀಗ ಆದೇಶಿಸಿದೆ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಬಿಜೆಪಿ ಪರಿಷ್ಕೃತ ಪಠ್ಯ ಕೈ ಬಿಟ್ಟಿದ್ದ ಕಾಂಗ್ರೆಸ್ ಹೊಸ ಪಠ್ಯ ಕ್ರಮ ತರಲಿದೆ.

ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದಿದ್ದ ಪರಿಷ್ಕರಣೆ ರದ್ದು ಮಾಡಿದ್ದ ಕಾಂಗ್ರೆಸ್ ಸರ್ಕಾರ. ಬಿಜೆಪಿ ಅವಧಿಯ ಪರಿಷ್ಕರಣೆಗೆ ಸಂಪೂರ್ಣ ಕೈ ಬಿಡುವ ನಿಟ್ಟಿನಲ್ಲಿ ತಜ್ಞರ ಸಮಿತಿ ರಚನೆ ಮಾಡಲಿದೆ.

1 ರಿಂದ 10ನೇ ತರಗತಿಗಳ ಸಂಪೂರ್ಣ ಪಠ್ಯಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ ಮಾಡಲಾಗಿದೆ.ಕನ್ನಡ, ಸಮಾಜ ವಿಜ್ಞಾನ ವಿಷಯಗಳ ಸಂಪೂರ್ಣ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದೆ.

ಪರಿಷ್ಕರಣೆಗೆ 38 ಜನ ತಜ್ಞರ ಸಮಿತಿ ನೇಮಕ ಮಾಡಿ ಸರ್ಕಾರದ ಆದೇಶ ಹೊರಡಿಸಿದೆ.ಒಬ್ಬರು ಮುಖ್ಯ ಸಂಯೋಜಕರು, 5 ಜನ ಅಧ್ಯಕ್ಷರು, 37 ಜನ ಸದಸ್ಯ ನೇಮಕ ಮಾಡಿ ಆದೇಶ ಹೊರಡಿಸಿದೆ.

3 ತಿಂಗಳಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ವರದಿ ನೀಡಲು ಸೂಚನೆ ನೀಡಲಾಗಿದೆ. 2024-25ನೇ ಸಾಲಿನಿಂದ ಪರಿಷ್ಕೃತ ಪಠ್ಯ ಜಾರಿಗೆ ತರಲು ರಾಜ್ಯ ಸರ್ಕಾರದಿಂದ ಸಿದ್ಧತೆ ಆರಂಭವಾಗಿದೆ.

ಒಟ್ಟಿನಲ್ಲಿ ಇದೀಗ ಕಾಂಗ್ರೆಸ್ ಸರ್ಕಾರ ಹೊಸ ತಜ್ನರ ಸಮಿತಿ ರಚನೆ ಮಾಡಿ. ಹೊಸ ಪಠ್ಯ ಕ್ರಮವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯ ಪ್ರವ್ರತ್ತವಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Views: 0