
ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್
ಚಿತ್ರದುರ್ಗ ಜೂ. 19 ಗಾಂಧಿ ಕುಟುಂಬದ ಕುಡಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‍ಗಾಂಧಿರವರ ಹುಟ್ಟುಹಬ್ಬದ ಅಂಗವಾಗಿ ಜಾನುಕೊಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಕ್ಕಳಿಗೆ ನೋಟ್‍ಬುಕ್, ಪೆನ್ ಹಾಗೂ ಸಿಹಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರಹಳ್ಳಿ ಉಲ್ಲಾಸ್ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರುರವರಿಗೆ ಮಕ್ಕಳೆಂದರೆ ಅಪಾರ ಪ್ರೀತಿ. ಹಾಗಾಗಿ ಅವರ ಮೊಮ್ಮಗ ರಾಹುಲ್‍ಗಾಂಧಿರವರ ಹುಟ್ಟು ಹಬ್ಬವನ್ನು ಮಕ್ಕಳಿಗೆ ನೋಟ್‍ಬುಕ್ ವಿತರಣೆ ಮೂಲಕ ಆಚರಿಸುತ್ತಿರುವುದು ನಮಗೆ ಖುಷಿ ಕೊಟ್ಟಿದೆ ಎಂದು ಹೇಳಿದರು.
ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಕಾಸ್, ನಗರಾಧ್ಯಕ್ಷ ಪವನ್, ಗ್ರಾಮಾಂತರ ಅಧ್ಯಕ್ಷ ಮಹಾಂತೇಶ್, ಉಪಾಧ್ಯಕ್ಷ ಸುನಿಲ್, ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗೇಶ್, ಶಶಿಕುಮಾರ್, ಬಾಲಣ್ಣ, ಸುರೇಶ್, ಶಿವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನ್ನಪೂರ್ಣಮ್ಮ ಹಾಗೂ ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Views: 6