ಚಿತ್ರದುರ್ಗ: ಮದ್ಯ ಕರ್ನಾಟಕದ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಮಾಡಿದಷ್ಟು ನೀಡು ಭಿಕ್ಷೆ ಹಟ್ಟಿ ತಿಪ್ಪೇಶನ ರಥೋತ್ಸವ ಮಂಗಳವಾರ (ಮಾರ್ಚ್ 26) ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನೆರವೇರಿತು.

ಮಠ ಮಠ ಮಧ್ಯಾಹ್ನವೇ ಬೀಸಿಲು, ಗಾಳಿ, ಧೂಳು ಯಾವುದನ್ನು ಲೆಕ್ಕಿಸದೆ ಹಟ್ಟಿ ತಿಪ್ಪೇಶನ ರಥೋತ್ಸವಕ್ಕೆ ಬೆಳಗ್ಗೆಯಿಂದಲೇ ಲಕ್ಷಾಂತರ ಭಕ್ತರು ಸಾಗರೋಪದಿಯಲ್ಲಿ ಸೇರಿದ್ದರು. ಐತಿಹಾಸಿಕ ದೊಡ್ಡಕೆರೆ ಹೊಂದಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಪವಾಡಗಳ ಮೂಲಕ ಮಧ್ಯ ಕರ್ನಾಟಕ ಜನಮಾನದಲ್ಲಿ ನೆಲೆ ನಿಂತಿರುವ ರಥೋತ್ಸವ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಮಧ್ಯಾಹ್ನ 3:15ಗಂಟೆಗೆ ಚಿತ್ತಾ ನಕ್ಷತ್ರದಲ್ಲಿ ತಿಪ್ಪೇರುದ್ರಸ್ವಾಮಿ ರಥವನ್ನು ರಥದ ಬೀದಿಯಿಂದ ಹೊರಮಠದವರಿಗೆ ಭಕ್ತರು ಎಳೆದರು. ಈ ವೇಳೆ ಸಾಹಸ್ರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿಭಾವದ ಸಮರ್ಪಣೆ ಅರ್ಪಿಸಿದರು.
ತಿಪ್ಪೇರುದ್ರಸ್ವಾಮಿ ಐಕ್ಯ ಆಗಿರುವ ಹೊರಮಠ ಹಾಗೂ ದೇವರ ವಿಗ್ರಹ ಮತ್ತು ಮುಖ್ಯವಾಗಿರುವ ಒಳಮಠ ಎರಡು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುಳಕಿತರಾದರು. ಶ್ರೀ ತಿಪ್ಪೇರುದ್ರಸ್ವಾಮಿಯ ಜಾತ್ರೆಯ ವಿಶೇಷತೆಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟ ಹರಾಜು ಪ್ರಕ್ರಿಯೆ ಒಂದಾಗಿದೆ. ಈ ಹರಾಜು ಪ್ರಕ್ರಿಯೆಯಲ್ಲಿ ದೇವರ ಮುಕ್ತಿ ಬಾವುಟ ಪಡೆಯಲು ಹಲವಾರು ಭಾಗಿ ಆಗಿದ್ದರು. ಅಂತಿಮವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ₹61,00,000 ಮುಕ್ತಿ ಬಾವುಟವನ್ನು ತನ್ನದಾಗಿಸಿಕೊಂಡರು. ಕಳೆದ ವರ್ಷವೂ ಸಚಿವ ಡಿ.ಸುಧಾಕರ್ ಅವರೇ ಹರಾಜಿನಲ್ಲಿ ₹55,00,000ಕ್ಕೆ ಮುಕ್ತಿ ಬಾವುಟ ಪಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಜಾತ್ರೆಗೆ ಹರಿದು ಬಂದ ಭಕ್ತ ಸಾಗರ: ಚಳ್ಳಕೆರೆ ತಾಲೂಕಿನ ನಾಯಕನಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ದತ್ತ ಸಾಗರದಲ್ಲಿ ಹರಿದುಬಂದಿತು. ಬಳ್ಳಾರಿ, ರಾಯಚೂರು, ತುಮಕೂರು, ಕೊಪ್ಪಳ, ಗದಗ ಸೇರಿದಂತೆ ಅಕ್ಕಪಕ್ಕದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದಿಂದಲೂ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.
ಜಾತ್ರೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು. ಈ ನಿಟ್ಟಿನಲ್ಲಿ ಸುಸುತ್ರವಾಗಿ ಜಾತ್ರೆ ನೇರವೇರಿತು. ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಅಪಾರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಉಪವಿಭಾಗಾಧಿಕಾರಿ ಕಾರ್ತೀಕ್ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1