ಭಾರತ ಮತ್ತು ಇಂಗ್ಲೆಂಡ್ (India vs England) ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದಾಗ ಆಘಾತ ಎದುರಿಸಿತು. ಭಾರತ ತಂಡ ಆರಂಭದಲ್ಲಿಯೇ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ರೂಪದಲ್ಲಿ ಪ್ರಮುಖ 2 ವಿಕೆಟ್ ಕಳೆದುಕೊಂಡಿತು.
![](https://samagrasuddi.co.in/wp-content/uploads/2024/02/image-12.png)
ಆದರೆ ಬಳಿಕ ಆರಂಭಿಕರಾಗಿ ಕಣಕ್ಕಿಳಿದಿದ್ದ ಯಶಸ್ವಿ ಜೈಸ್ವಾಲ್ ಆಂಗ್ಲ ಬೌಲರ್ ಗಳ ಬೆವರಿಳಿಸಿದರು. ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡ ನೋಡುತ್ತಿದ್ದಂತೆ ಶತಕ ಸಿಡಿಸಿ ಮಿಂಚಿದರು. ಅಲ್ಲದೇ ಮೊದಲ ದಿನದಾಟದ ಅಂತ್ಯಕ್ಕೆ ಅಬ್ಬರದ ಬ್ಯಾಟಿಂಗ್ ಮೂಲಕ ಮಿಂಚಿದ ಅವರು ನಾಳೆಗೆ ಕ್ರೀಸ್ ಕಾಯ್ದಿರಿಸಿಕೊಂಡಿದ್ದಾರೆ. ಅಂತಿಮವಾಗಿ ಭಾರತ ತಂಡ ಮೊದಲ ದಿನದಾಟದ ಅಂತ್ಯಕ್ಕೆ 90 ಓವರ್ಗೆ 6 ವಿಕೆಟ್ ಕಳೆದುಕೊಂಡು 93 ಓವರ್ಗೆ 336 ರನ್ ಗಳಿಸಿದೆ. ಈ ಮೂಲಕ ಮೊದಲ ದಿನದಾಟದ ಅಂತ್ಯಕ್ಕೆ ಭಾರತ ತಂಡ ಮೇಲುಗೈ ಸಾಧಿಸಿದೆ.
ಯಶಸ್ವಿ ಜೈಸ್ವಾಲ್ ಭರ್ಜರಿ ಬ್ಯಾಟಿಂಗ್:
ಆರಂಭಿಕ ಆಘಾತ ಬಳಿಕ ಯಶಸ್ವಿ ಜೈಸ್ವಾಲ್ ಅಬ್ಬರ ಮಾತ್ರ ನಿಲ್ಲಲಿಲ್ಲ. ಆಂಗ್ಲರ ವಿರುದ್ಧ ಜೈಸ್ವಾಲ್ ತಮ್ಮ ಟೆಸ್ಟ್ ವೃತ್ತಿಜೀವನದ 2ನೇ ಶತಕ ಹಾಗೂ ತವರಿನಿಲ್ಲಿ ಮೊದಲ ಶತಕ ಸಿಡಿಸಿದರು. ಯಶಸ್ವಿ ಜೈಸ್ವಾಲ್ ಅವರು 151 ಎಸೆತಗಳಲ್ಲಿ 11 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ ಟೆಸ್ಟ್‌ನಲ್ಲಿ ತಮ್ಮ ಎರಡನೇ ಶತಕವನ್ನು ಗಳಿಸಿದರು. ಶತಕದ ಬಳಿಕವೂ ಜೈಸ್ವಾಲ್ ಬ್ಯಾಟ್ ಸುಮ್ಮನಾಗಲಿಲ್ಲ. ದಿನದಾಟದ ಅಂತ್ಯಕ್ಕೆ ಅವರು 257 ಎಸೆತದಲ್ಲಿ 5 ಸಿಕ್ಸ್ ಮತ್ತು 17 ಬೌಂಡರಿ ಮೂಲಕ 179 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.
![](https://samagrasuddi.co.in/wp-content/uploads/2024/02/image-12.png)
ರೋಹಿತ್ ಶರ್ಮಾ ಅವರು ಶೋಯೆಬ್ ಬಷೀರ್ ಬೌಲಿಂಗ್ನಲ್ಲಿ 14 ರನ್ ಗಳಿಸಿದ್ದಾಗ ಓಲಿ ಫೋಫ್ಗೆ ಕ್ಯಾಚ್ ನೀಡಿ ಪೆವೆಲಿಯನ್ ಸೇರಿದರು. ಬಳಿಕ ಶುಭ್ಮನ್ ಗಿಲ್ ಸಹ ಕೇವಲ 34 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಗಿಲ್ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ಟೆಸ್ಟ್ ಕ್ರಿಕೆಟ್ ನಲ್ಲಿ ಎಡವಿದ್ದಾರೆ. ಉಳಿದಂತೆ ಶ್ರೇಯಸ್ ಅಯ್ಯರ್ ಸಹ 27 ರನ್ ಗಳಿಸುವ ಮೂಲಕ ಮತ್ತೊಮ್ಮೆ ವಿಫಲರಾದರು. ಚೊಚ್ಚಲ ಟೆಸ್ಟ್ ಪಂದ್ಯ ಆಡುತ್ತಿರುವ ರಜತ್ ಪಾಟಿದಾರ್ ಸಹ 32 ರನ್ ಗಳಿಸಿದ್ದಾಗ ಅದೃಷ್ಟ ಕೈಕೊಟ್ಟು ಔಟ್ ಆದರೆ ಅಕ್ಷರ್ ಪಟೇಲ್ 27 ರನ್, ಕೆಎಸ್ ಭರತ್ 17 ರನ್ ಹಾಗೂ ಆರ್ ಅಶ್ವಿನ್ 5 ರನ್ ಗಳಿಸಿ ನಾಳೆಗೆ ಕ್ರೀಸ್ ಕಾಯ್ದಿರಿಸಿಕೊಂಡಿದ್ದಾರೆ.
ಭಾರತ – ಇಂಗ್ಲೆಂಡ್ ಪ್ಲೇಯಿಂಗ್ 11:
ಟೀಂ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್, ಕೆಎಸ್ ಭರತ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್.
ಇಂಗ್ಲೆಂಡ್ ಪ್ಲೇಯಿಂಗ್ 11: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫಾಕ್ಸ್, ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಶೋಯೆಬ್ ಬಶೀರ್, ಜೇಮ್ಸ್ ಆಂಡರ್ಸನ್.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/Telegram: https://t.me/+E1ubNzdguQ5jN2Y1