ಸಿಸಿ ಕ್ಯಾಮೆರಾ, ವೆಬ್ಕ್ಯಾಸ್ಟಿಂಗ್ ನಡೆಸಿ ಭದ್ರತೆ ಫಲಿತಾಂಶ 60%ಕ್ಕೆ ಕುಸಿದರೂ ಅಚ್ಚರಿ ಇಲ್ಲ?

ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣದಲ್ಲಿ ವರ್ಷದಿಂದ ವರ್ಷಕ್ಕೆ ದಾಖಲೆ ಬರೆಯುತ್ತಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಈ ಬಾರಿ ಕುಸಿತ ಕಾಣುವ ಸಾಧ್ಯತೆ ಇದೆ. ಏಕೆಂದರೆ, ಎಲ್ಲ ಪರೀಕ್ಷಾ ಕೇಂದ್ರಗಳು, ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿ ಸುವ ಜೊತೆಗೆ ವೆಬ್ ಕ್ಯಾಸ್ಟಿಂಗ್ ಕೂಡ ಮಾಡಿರುವುದರಿಂದ ರಾಜ್ಯದ ಎಲ್ಲೆಡೆ ಪರೀಕ್ಷೆಕಟ್ಟು ನಿಟ್ಟಾಗಿ ನಡೆದಿದೆ. ‘ಕೈಚಳಕ ಮತ್ತು ಕಳಕ’ಕ್ಕೆ ಅವಕಾಶ ಸಿಗದ ಕಾರಣ ಫಲಿತಾಂಶ ಕುಸಿತವಾಗಲಿದೆ ಎಂದು ಹೇಳಲಾಗಿದೆ.
ಮೌಲ್ಯಮಾಪನ ಕಾರ್ಯ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, ಮುಂದಿನ ವಾರ ಫಲಿತಾಂಶ ನಿರೀಕ್ಷಿಸಲಾಗಿದೆ. ಉತ್ತೀರ್ಣ ಪ್ರಮಾಣ ಶೇ.60ರ ಆಸುಪಾಸು ಇದ್ದರೂಆಶ್ಚರ್ಯವಿಲ್ಲಎಂದುಮೂಲಗಳು ತಿಳಿಸಿವೆ. ಹಿಂದಿನ ಎರಡು ವರ್ಷಗಳಲ್ಲಿ ಉತ್ತೀರ್ಣ ಪ್ರಮಾಣ ಕ್ರಮವಾಗಿ ಶೇ.85 ಮತ್ತು ಶೇ.83ರಷ್ಟು ದಾಖಲಾಗಿತ್ತು.
ಇದನ್ನೂ ಓದಿ: ಶಾಲಾ ಆರಂಭಕ್ಕೂ ಮುನ್ನವೇ ವಿದ್ಯಾರ್ಥಿಗಳಿಗೆ ‘ಪಠ್ಯಪುಸ್ತಕ ವಿತರಣೆ’ಗೆ ಬಗ್ಗೆ ಗುಡ್ ನ್ಯೂಸ್.
ಶೈಕ್ಷಣಿಕವಾಗಿ ಮುಂದಿರುವ ಕರಾವಳಿ ಜಿಲ್ಲೆಗಳು ಈ ಬಾರಿ ಫಲಿತಾಂಶದಲ್ಲಿ ಮುಂಚೂಣಿಯಲ್ಲಿ ಇರಲಿವೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳ ಫಲಿತಾಂಶ ಎಂದಿನಂತೆ ಕಡಿಮೆ ಇರಲಿದೆ ಎಂದು ಹೇಳಲಾಗಿದೆ. ಮಾರ್ಚ್ ಕೊನೆಯ ವಾರದಲ್ಲಿ ನಡೆದ ಪರೀಕ್ಷೆಗೆ 8.9 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು. ಕಳೆದ ತಿಂಗಳು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಾಖಲೆಯ ಶೇ.81ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsAppGroup:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1