‘ಕರೆಂಟ್ ಶಾಕ್’ನಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ವಿದ್ಯುತ್ ದರ’ ಭಾರೀ ಇಳಿಕೆ.

ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ  ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್​ ನೀಡಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್​ ಕೊಡುಗೆ ನೀಡಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್​ 1ರಿಂದಲೇ ಅನ್ವಯವಾಗಲಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *