ಚಿತ್ರದುರ್ಗ ಆ. 01.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಮುಂಬರುವ ಚಳಿಗಾಲದ ಅಧೀವೇಶನದಲ್ಲಿ ಮಾದಿಗ ಸಮುದಾಯದ ಬಹು ದಿನದ ಬೇಡಿಕೆಯಾದ ಒಳ ಮೀಸಲಾತಿಯನ್ನು ರಾಜ್ಯ
ಸರ್ಕಾರ ಜಾರಿ ಮಾಡದಿದ್ದರೆ ಮುಂದಿನ ದಿನದಲ್ಲಿ ಸರ್ಕಾರ ಮಾದಿಗರ ಉಗ್ರವಾದ ಆಕ್ರೋಶಕ್ಕೆ ತುತ್ತಾಗಬೇಕಿದೆ ಎಂಬ
ಎಚ್ಚರಿಕೆಯನ್ನು ಚಿತ್ರದುರ್ಗದಲ್ಲಿ ಶುಕ್ರವಾರ ನಡೆದ ಸ್ವಾಭಿಮಾನಿ ಮಾದಿಗ ಮಹಾಸಭಾ ನೀಡಿದೆ.
ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನಾ
ಮೆರವಣಿಗೆಯನ್ನು ನಡೆಸಿದ ಮಾದಿಗ ಸಮುದಾಯ ದಾರಿಯ ಮಧ್ಯದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು
ಮಾಡಿತು, ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ತಮ್ಮ ಕೊರಳಗೆ ನೀಲಿ ಬಣ್ಣದ ಶಾಲನ್ನು ಧರಿಸಿದ್ದರು ಅದರಲ್ಲಿ ಅಂಬೇಡ್ಕರ್
ರವರ ಭಾವ ಚಿತ್ರ ಹಾಗೂ ಜೈ ಭೀಮ ಎಂಬುದಾಗಿ ನಮೂದಿಸಲಾಗಿತ್ತು. ಇದ್ದಲ್ಲದೆ ಕೆಲವರ ಕೈಯಲ್ಲಿ ದೊಡ್ಡದಾದ ಭಾವುಟವನ್ನು
ಹಿಡಿದು ಅದನ್ನು ತಿರುಗಿಸುತ್ತಾ ಮೆರವಣಿಗೆಯಲ್ಲಿ ಸಾಗುತ್ತಿದ್ದ ಹಾಗೂ ಪ್ರತಿಭಟನಾಕಾರರ ಕೈಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುವ
ಭೀತ್ತಿ ಪತ್ರಗಳನ್ನು ಹಿಡಿದುಕೊಂಡಿದ್ದ ದೃಶ್ಯ ಕಂಡು ಬಂದಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮುದಾಯದ ಮುಖಂಡರಾದ ಜಿ.ಹೆಚ್.ಮೋಹನ್ ಕುಮಾರ್ ಮಾತನಾಡಿ ಪರಿಶಿಷ್ಟ ಜಾತಿಗಳ
ಸಮುದಾಯದೊಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ
ಸಲುವಾಗಿ ಜಾರಿಯಾಗಬೇಕಿರುವ ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 35 ವರುಷಗಳಿಂದ ನನೆಗುದಿಗೆ ಬಿದ್ದಿದೆ. ಈ
ಅಸಮಾನತೆಯನ್ನು ಸರಿಪಡಿಸಲು, ದಿನಾಂಕ 1-08-2024 ರ ಸರ್ವೋಚ್ಛ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ಪರಿಶಿಷ್ಟ ಜಾತಿ
ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ
ಆದೇಶವನ್ನು ನೀಡಿದೆ.ಆದರೆ, ಕರ್ನಾಟಕ ಸರ್ಕಾರವು ಈ ಸರ್ವೋಚ್ಛ ನ್ಯಾಯಾಲಯದ ತೀರ್ಪುನ್ನು ಜಾರಿಗೊಳಿಸಲು ಅನಗತ್ಯವಾಗಿ
ವಿಳಂಬ ಮಾಡುತ್ತಿರುವುದು ನಮ್ಮ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಆತಂಕಕ್ಕೆ ಕಾರಣವಾಗಿದೆ ಎಂದರು.
ಮೂರವರೆ ದಶಕಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಅರೆ ಬೆತ್ತಲೆ ಮೆರವಣಿಗೆ, ಹೋರಾಟ,
ಚಳುವಳಿಗಳನ್ನು ಮಾಡಿದ್ದೇವೆ. ಮಾದಿಗರ ಮತಗಳನ್ನು ಪಡೆದಿರುವ ಕಾಂಗ್ರೆಸ್ ಪಕ್ಷ ನಮ್ಮನ್ನು ನಡು ಬೀದಿಯಲ್ಲಿ ನಿಲ್ಲಿಸಿದೆ.
ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವಂತೆ ತೀರ್ಪು ನೀಡಿ ಆ.1 ಕ್ಕೆ ಒಂದು ವರ್ಷವಾಗುತ್ತದೆ. ಅದರೂ ಸಹಾ ಸರ್ಕಾರ
ಇದನ್ನು ಜಾರಿ ಮಾಡಲು ವಿಳಂಭ ಮಾಡುತ್ತಿದೆ. ಈ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು,
ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ಹಾಗೂ ಒಟ್ಟಾರೆ ಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ
ವಂಚಿತರಾಗುತ್ತಿದ್ದಾರೆ.
2008ರಲ್ಲಿ ಸದಾಶಿವ ಆಯೋಗವನ್ನು ರಚಿಸಲಾಯಿತು. ಈಗ ದತ್ತಾಂಶ ಸಂಗ್ರಹಕ್ಕಾಗಿ ನಾಗಮೋಹನ್ ದಾಸ್ ಆಯೋಗವನ್ನು
ರಚಿಸಿದ್ದಾರೆ ಆದರೆ ಇದು ಮಾದಿಗರ ಬೇಡಿಕೆಯಲ್ಲ. ಆ.11 ರಿಂದ ಆರಂಭಗೊಳ್ಳುವ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು
ವರದಿ ಮಂಡನೆ ಚರ್ಚೆಯಾಗಬೇಕು. ಮುಂದೂಡುವ ಪ್ರಯತ್ನ ಮಾಡಿದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಅವರು,
ಮಾದಿಗರ ಮತಗಳನ್ನು ಪಡೆದು ಅಧಿಕಾರದಲ್ಲಿ ಕುಳಿತಿರುವ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದಿರಲ್ಲಿ ಮೀನಾ
ಮೇಷ ಮಾಡುತ್ತಿದೆ ಇದರ ಬಗ್ಗೆ ಸಮುದಾಯದವರ ಎಚ್ಚೆತ್ತುಕೊಳ್ಳಬೇಕಿದೆ ಕಾಂಗ್ರೆಸ್ ನಮ್ಮ ಪಕ್ಷ ಎಂದು ಹಲವಾರು ಬಾರಿ ಅದಕ್ಕೆ
ಮತವನ್ನು ನೀಡಲಾಗಿದೆ ಆದರೆ ಅದೇ ಪಕ್ಷದವರು ನಮಗೆ ಒಳ ಮೀಸಲಾತಿಯನ್ನು ಜಾರಿ ಮಾಡುವಲ್ಲಿ ಮಾತ್ರ ಮೋಸ
ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ತುರ್ತು ನಿಗಾ
ವಹಿಸಿ ತಮ್ಮ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿ ಆಗಿದ್ದಾರೆ. ಆದರೆ
ಆವರು ಯಾರು ಸಹಾ ಅಹಿಂದ ಹೋರಾಟಗಾರರಲ್ಲ, ಹಿಂದುಳಿದ ನಾಯಕರಲ್ಲ ಆದರೂ ಸಹಾ ನಮ್ಮ ಸಮುದಾಯಕ್ಕೆ
ಅನುಕೂಲವಾಗಲೆಂದು ಜಾರಿ ಮಾಡಿದ್ದಾರೆ ಆದರೆ ನಮ್ಮ ರಾಜ್ಯದಲ್ಲಿ ಅಹಿಂದ ನಾಯಕ ಹಿಂದುಳಿದ ನಾಯಕ ಎಂದೆಲ್ಲಾ ಹೆಸರನ್ನು
ಪಡೆದ ಸಿದ್ದರಾಮಯ್ಯ ಚುನಾವಣೆಯಲ್ಲಿ ಇದನ್ನು ಜಾರಿ ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದವರು ಇದುವರೆವಿಗೂ
ಸಾತಾಯಿಸಿದ್ದಾರೆ ಆದರೆ ಕರ್ನಾಟಕ ಸರ್ಕಾರ ತೀವ್ರವಾದ ವಿಳಂಬ ನೀತಿ ಅನುಸರಿಸುತ್ತಿದ್ದು ಪರಿಶಿಷ್ಟ ಜಾತಿಗಳಲ್ಲಿ ಅದರಲ್ಲೂ
ಮುಖ್ಯವಾಗಿ ಮಾದಿಗ ಮತ್ತು 29 ಉಪಜಾತಿಗಳಲ್ಲಿ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ ಎಂದರು.
ಚಳ್ಳಕೆರೆ ಶ್ರೀನಿವಾಸ್ ಮಾತನಾಡಿ, ಒಳ ಮೀಸಲಾತಿ ಜಾರಿಗಾಗಿ ಕಳೆದ 35 ವರ್ಷಗಳಿಂದಲೂ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್
ಪಕ್ಷ ವ್ಯವಸ್ಥಿತವಾಗಿ ಮಾದಿಗರನ್ನು ವಂಚಿಸುತ್ತ ಬರುತ್ತಿರುವುದರಿಂದ ಈ ಬಾರಿ ಒಳ ಮೀಸಲಾತಿ ಜಾರಿಯಾಗುವತನಕ ನಮ್ಮ
ಹೋರಾಟ ನಿಲ್ಲುವುದಿಲ್ಲವೆಂದು ರಾಜ್ಯ ಸರ್ಕಾರಕ್ಕೆ ಚಳ್ಳಕೆರೆ ಶ್ರೀನಿವಾಸ್ ಎಚ್ಚರಿಸಿದ್ದಾರೆ. ಈ ಮಧ್ಯೆ ಒಳ ಮೀಸಲಾತಿ ಜಾರಿಗೊಳಿ
ಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿ 2024 ಆ.1 ಕ್ಕೆ ಒಳ ಮೀಸಲಾತಿಯನ್ನು ಜಾರಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ
ಆದೇಶವನ್ನು ನೀಡಿದರು ಸಹಾ ಇಲ್ಲಿಗೆ ಒಂದು ವರ್ಷ ಪೂರೈಸುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಅನುಷ್ಟಾನಕ್ಕೆ ತರಲು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ದೂರಿದರು.
ನಾಗಮೋಹನ್ ದಾಸ್ ವರದಿಯ ಬಗೆಗಿನ ಗೊಂದಲಗಳು, ಸರ್ಕಾರದ ನಿರ್ಲಕ್ಷದ ಧೋರಣೆಯ ಬಗ್ಗೆ ಎಚ್ಚರಿಕೆಯ ಘಂಟೆ
ಬಾರಿಸುತ್ತಿದ್ದೇವೆ ಸರ್ಕಾರ ಸರಿದಾರಿಗೆ ಬರಬೇಕು. ತಕ್ಷಣ ಒಳಮೀಸಲಾತಿ ಜಾರಿಮಾಡ ಬೇಕೆಂಬುದು ನಮ್ಮ ಅಗ್ರಹ . ಆಗಸ್ಟ್
11ರಿಂದ ಪ್ರಾರಂಭವಾಗುವ ವಿಧಾನ ಮಂಡಲಗಳ ಅಧಿವೇಶನ ಆರಂಭವಾಗುತ್ತಿದ್ದು ಸರ್ಕಾರದ ನಿರ್ಲಕ್ಷ, ವಿಳಂಬ ಧೋರಣೆಯ ಬಗ್ಗೆ
ಜನಾಕ್ರೋಶ ಉಗ್ರಸ್ವರೂಪ ತಾಳುವುದು ನಿಶ್ಚಿತ ಎಂದು ಈ ಮೂಲಕ ಎಚ್ಚರಿಸುತ್ತೇವೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ
ಆಧಾರದ ಮೇಲೆ ಸಂಪೂರ್ಣವಾಗಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು. ಒಂದು ವೇಳೆ
ಸರ್ಕಾರವು ಈ ಗಡುವಿನೊಳಗೆ ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ, ನಮ್ಮ ಹಕ್ಕುಗಳಿಗಾಗಿ ಕರ್ನಾಟಕದಾದ್ಯಂತ
ಇರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು. ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ
ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ