ಚಿತ್ರದುರ್ಗ ಜೂ. 23
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಗಲಿದ ಹಿರಿಯ ಪತ್ರಕರ್ತರು, ಸಾಹಿತಿಗಳಾದ ಜಿ.ಎಸ್.ಉಜ್ಜನಪ್ಪ ಅವರ ನುಡಿನಮನ ಕಾರ್ಯಕ್ರಮವನ್ನು ಜೂ.24 ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದ ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಹೊಸದುರ್ಗ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಸ್.ವಿನಾಯಕ ತೊಡರನಾಳು ಅಧ್ಯಕ್ಷತೆ ವಹಿಸುವರು.
ಮಾಧ್ಯಮ ಅಕಾಡೆಮಿ ಸದಸ್ಯರಾದ ಎಂ.ಎನ್.ಅಹೋಬಲಪತಿ ದಿಕ್ಸೂಚಿ ಭಾಷಣ ಮಾಡುವರು. ರಾಜ್ಯ ಸಭೆಯ ಮಾಜಿ ಸದಸ್ಯರು, ಜಿ.ಎಸ್.ಉಜ್ಜನಪ್ಪರವರ ಆಪ್ತರಾದ ಎಚ್.ಹನುಮಂತಪ್ಪ, ಪ್ರಾಧ್ಯಾಪಕಿ ಹಾಗೂ ವಿಮರ್ಶಕಿ ತಾರಿಣಿ ಶುಭದಾಯಿನಿ, ನಿವೃತ್ತ ಪ್ರಾಧ್ಯಾಪಕರಾದ ಎಂ.ಜಿ.ರಂಗಸ್ವಾಮಿ ನುಡಿನಮನ ಸಲ್ಲಿಸಲಿದ್ದಾರೆ.
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ, ವಾರ್ತಾ ಇಲಾಖೆ ನಿವೃತ್ತ ಅಧಿಕಾರಿ ದೇವರಾಜಯ್ಯ, ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಹರಿಯಬ್ಬೆ ಹೆಂಜಾರಪ್ಪ ಭಾಗವಹಿ ಸುವರು ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೀರೇಶ್ ವಿ ಅಪ್ಪು ತಿಳಿಸಿದ್ದಾರೆ.