ಚಿತ್ತೂರು: ತಿಮ್ಮಪನ ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಲಾರಿಯೊಂದು ಕಾರಿನ ಮೇಲೆ ಉರುಳಿದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಭಕ್ತಾಧಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಬಳಿ ನಡೆದಿದೆ.

ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಮುನಿವೆಂಕಟ ರೆಡ್ಡಿ, ಮಂಜುನಾಥ್, ರಮೇಶ್ ಎಂದು ಗುರುತಿಸಲಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್.ಸುಬ್ಬರಾಯುಡು, ತಿರುಪತಿಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಬವಿಸಿದೆ. ಲಾರಿ ಉರುಳಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ದ್ಯ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾವಿಸಿದ್ದು ಚಂದ್ರಗಿರಿ ಮತ್ತು ಭಾಕರಪೇಟ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್.ಸುಬ್ಬರಾಯುಡು ತಿಳಿಸಿದ್ದಾರೆ.
Source : https://www.vijayavani.net/three-killed-after-truck-overturns-on-car-in-chittoor
Views: 0