ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜು. 27 : ಗ್ರಾಮೀಣ ಭಾಗದಲ್ಲಿರುವ ಸಮಸ್ಯೆಗಳನ್ನು ಗುರುತಿಸಿ ಹೋರಾಟ ನಡೆಸುವ ಮೂಲಕ ಪರಿಹರಿಸುವ ಪ್ರಯತ್ನ ಮಾಡಲಾಗುವುದೆಂದು ಜನತಾ ಸ್ವರಾಜ್ಯ ಸಂಘಟನೆ ರಾಜ್ಯಾಧ್ಯಕ್ಷ ಎಂ.ಹೆಚ್.ಶಶಿಧರ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣ ಆರೋಗ್ಯಕ್ಕೆ ಹೆಚ್ಚಿನ ಒತ್ತು ಕೊಟ್ಟು ಹೋರಾಡಲಾಗುವುದು. ಮಹಿಳೆಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ, ದೌರ್ಜನ್ಯ, ದಬ್ಬಾಳಿಕೆ, ಆತ್ಯಾಚಾರ ಇವುಗಳ ವಿರುದ್ದ ಹೋರಾಡಿ ಆಳುವ ಸರ್ಕಾರಗಳ ಕಣ್ಣು ತೆರೆಸುವುದು ನಮ್ಮ ಸಂಘಟನೆಯ ಮುಖ್ಯ ಉದ್ದೇಶ ಎಂದು ಹೇಳಿದರು.
ಜನತಾ ಸ್ವರಾಜ್ಯ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಮಂಜುನಾಥ್ ಕಳ್ಳಿಹಟ್ಟಿ ಮಾತನಾಡುತ್ತ ಕಳೆದ ಎರಡು ವರ್ಷಗಳಿಂದಲು ಸಂಘಟನೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡುತ್ತಿದೆ. ಪ್ರಸ್ತುತ ದಿನಮಾನಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ಅಲ್ಪಸಂಖ್ಯಾತರು, ಶೋಷಿತರು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿರುವುದರ ವಿರುದ್ದ ಜಾಗೃತಿ ಮೂಡಿಸುವುದು ಸಂಘಟನೆಯ ಗುರಿ ಎಂದರು.
ರಾಜ್ಯ ವಕ್ತಾರ ಬಿ.ಎನ್.ಅಜಯ್‌ಬಾಬು, ಲಲಿತಾ ಕೃಷ್ಣಮೂರ್ತಿ ತಿಪ್ಪೇಸ್ವಾಮಿ ಮಾರಘಟ್ಟ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.