ಸಿಂಗಾಪುರದಲ್ಲಿ ಮತ್ತೆ ಕೋವಿಡ್‌ನ ಹೊಸ ತಳಿಯ ಅಲೆ ಕಾಣಿಸಿಕೊಂಡಿದ್ದು, ಒಂದೇ ವಾರದಲ್ಲಿ 25,900 ಪ್ರಕರಣ ಪತ್ತೆಯಾಗಿವೆ. ಇದರಿಂದಾಗಿ ದೇಶದಲ್ಲಿ ಜನರು ಮತ್ತೆ ಮಾಸ್ಕ್ ಧರಿಸಲು ಆರಂಭಿಸಿದ್ದಾರೆ.
ಸಿಂಗಾಪುರದಲ್ಲಿ ಕೋವಿಡ್ ತಳಿ ಹೊಸ ಅಲೆ ಕಾಣಿಸಿಕೊಂಡಿದ್ದು ಮೇ 5 ರಿಂದ 11ರವರೆಗೆ 25900 ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಎಲ್ಲರೂ ತಪ್ಪದೇ ಮಾಸ್ಕ್ ಧರಿಸುವಂತೆ ಶನಿವಾರ ಆರೋಗ್ಯ ಸಚಿವ ಓಂಗ್ ಯೇ ಕುಂಗ್ ಜನಸಾಮಾನ್ಯರಿಗೆ ಸಲಹೆ ನೀಡಿದ್ದಾರೆ.
ಕೋವಿಡ್‌ನ ಹೊಸ ತಳಿಯ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮುಂದಿನ ನಾಲ್ಕೈದು ವಾರಗಳಲ್ಲಿ ಅಂದರೆ ಜೂನ್ ತಿಂಗಳ ಮಧ್ಯದಲ್ಲಿ ಪ್ರಕರಣಗಳ ಸಂಖ್ಯೆ ಇನ್ನಷ್ಟು ಏರಿಕೆಯಾಗಬಹುದು. ಆದ್ದರಿಂದ ಎಲ್ಲರೂ ತಪ್ಪದೇ ಮಾಸ್ಕ್ ಬಳಸುವ ಮೂಲಕ ರೋಗ ಹರಡುವಿಕೆಯನ್ನು ತಡೆಗಟ್ಟುಬೇಕು ಎಂದು ಹೇಳಿದರು. ಕೋವಿಡ್ ಬಗ್ಗೆ ಆತಂಕ ಪಡಬೇಕಿಲ್ಲ. ಇದಕ್ಕೆ ಆಸ್ಪತ್ರೆಗಳಲ್ಲಿ ಈಗಾಗಲೇ ಬೆಡ್‌ಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು, ಹಾಂಗ್‌ಕಾಂಗ್, ಆಸ್ಟ್ರೇಲಿಯಾ, ಚಿಲಿ ಮೊದಲಾದ ದೇಶಗಳಲ್ಲಿ ಮತ್ತೆ ಭಾರೀ ಪ್ರಮಾಣದಲ್ಲಿ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ.
ಸಿಂಗಾಪುರ ಸುಂದರ ದೇಶ. ತನ್ನ ಸೌಂದರ್ಯದ ಮೂಲಕವೇ ಈ ದೇಶ ಎಲ್ಲರನ್ನೂ ತನ್ನತ್ತ ಆಕರ್ಷಿಸುತ್ತಿರುತ್ತದೆ. ಭಾರತದಿಂದಲೂ ಸಾಕಷ್ಟು ಪ್ರವಾಸಿಗರು ಸಿಂಗಾಪುರಕ್ಕೆ ಭೇಟಿ ನೀಡುತ್ತಾರೆ. ಅದೂ ಅಲ್ಲದೆ, ಸಿಂಗಾಪುರದಲ್ಲಿ ವಿವಿಧ ಸಂಸ್ಕೃತಿಗಳನ್ನೂ ನೋಡಬಹುದಾಗಿದೆ. ಚೀನಾ, ಮಲಾಯ್ ಮತ್ತು ಭಾರತೀಯ ಮೂಲದವರು ಇಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ಸಿಂಗಾಪುರದ ಐತಿಹಾಸಿಕ ಜಿಲ್ಲೆಗಳು ಸಾಕಷ್ಟಿವೆ. ಜತೆಗೆ, ಇದು ಅತ್ಯಂತ ಸಾಂಪ್ರದಾಯಿಕ ಪ್ರದೇಶ ಕೂಡಾ ಹೌದು. ಚೀನಾದ ಸಂಸ್ಕೃತಿಯನ್ನು ಇಲ್ಲಿ ಕಣ್ತುಂಬಿಕೊಳ್ಳಬಹುದು. ಇಲ್ಲಿ ಒಂದು ಕ್ಷಣ ಚೀನಾದಲ್ಲೇ ಇದ್ದೆವೆಯೋ ಏನೋ ಎಂಬಂತೆ ಭಾಸವಾದರೂ ಅಚ್ಚರಿಯೇನೂ ಇಲ್ಲ. ಇಂಥಹ ಅನುಭವವನ್ನು ಪಡೆಯಲು ಭಾರತದಿಂದಲೂ ಸಾಕಷ್ಟು ಜನ ಇಲ್ಲಿಗೆ ಭೇಟಿ ನೀಡುತ್ತಾರೆ.
ಆದರೆ ಸದ್ಯ ಇಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗುತ್ತಿದೆ. ದೇಶದಿಂದ ದೇಶಕ್ಕೆ ಪ್ರಯಾಣ ಮಾಡುವಾಗಲೂ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಒಂದು ವೇಳೆ ಕೊರೊನಾ ಲಕ್ಷಣಗಳು ಕಂಡು ಬಂದರೆ ಅಂತಹ ಪ್ರಯಾಣಿಕರನ್ನು ತಡೆಹಿಡಿಯಲಾಗುತ್ತಿದೆ.