Tech: ಆನ್‌ಲೈನ್ ಶಾಪಿಂಗ್ ಪ್ರಿಯರ ಅಡ್ಡಾ ಆಗಿ ಗುರುತಿಸಿಕೊಂಡಿರುವ ಅಮೆಜಾನ್ ಇ ಕಾಮರ್ಸ್ ತಾಣವು ಮೊಬೈಲ್ ಫೋನ್‌ಗಳಿಗೆ ಏನಾದರೊಂದು ಡಿಸ್ಕೌಂಟ್ ಲಭ್ಯ ಮಾಡಿರುತ್ತದೆ. ಆ ಪೈಕಿ ಸದ್ಯ ಅಗ್ಗದ ಎಂಟ್ರಿ ಲೆವೆಲ್ ವಿಭಾಗದಲ್ಲಿ ಕಾಣಿಸಿಕೊಂಡಿರುವ ಟೆಕ್ನೋ ಸ್ಪಾರ್ಕ್ ಗೋ 2024 ಮೊಬೈಲ್ ಸಖತ್ ಡಿಸ್ಕೌಂಟ್ ಲಭ್ಯ ಮಾಡಿದೆ.

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಟೆಕ್ನೋ ಕಂಪನಿಯ ಟೆಕ್ನೋ ಸ್ಪಾರ್ಕ್ ಗೋ 2024 ಫೋನ್ ಶೇ. 11% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 6GB* RAM + 64GB ಸ್ಟೋರೇಜ್ ವೇರಿಯಂಟ್‌ನ ಆಫರ್ ಬೆಲೆಯು 7,099ರೂ. ಗಳು ಆಗಿದೆ. ಹಾಗೆಯೇ ಇತರೆ ಆಯ್ದ ಬ್ಯಾಂಕ್ ರಿಯಾಯಿತಿ ಅವಕಾಶಗಳನ್ನು ಸಹ ಖರೀದಿದಾರರು ಪಡೆದುಕೊಳ್ಳಬಹುದು.
ಇನ್ನು ಟೆಕ್ನೋದ ಈ ಫೋನ್ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಒಳಗೊಂಡಿದೆ. ಇದರ ಜೊತೆಗೆ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್ ಗೋ 2024 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ ಗೋ 2024 ಫೀಚರ್ಸ್ ಮಾಹಿತಿ
ಟೆಕ್ನೋ ಸ್ಪಾರ್ಕ್ ಗೋ (2024) ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸೌಲಭ್ಯ ಇದ್ದು, ಪಾಂಡಾ ಸ್ಕ್ರೀನ್ ಪ್ರೊಟೆಕ್ಷನ್ ಪಡೆದಿದೆ. ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಕೆಲಸ ನಿರ್ವಹಿಸುವ ಮತ್ತು ನೋಟಿಫಿಕೇಶನ್‌ಗಳನ್ನು ಕಾಣಿಸುವ ಡೈನಾಮಿಕ್ ಪೋರ್ಟ್ ಆಯ್ಕೆ ಪಡೆದಿದೆ.
ಟೆಕ್ನೋ ಸ್ಪಾರ್ಕ್ ಗೋ (2024) ಮೊಬೈಲ್ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 (Go Edition) ಆಧಾರಿತ HiOS 13 ನಲ್ಲಿ ಕೆಲಸ ನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಪಡೆದಿದೆ. ಇದಲ್ಲದೆ ಬಳಕೆದಾರರಿಗೆ ಬಳಕೆಯಾಗದ ಸಂಗ್ರಹಣೆಯನ್ನು ವರ್ಚುವಲ್ RAM ಆಗಿ ಬಳಸಿಕೊಳ್ಳಲು ಅನುಮತಿಸುತ್ತದೆ.
ಟೆಕ್ನೋ ಸ್ಪಾರ್ಕ್ ಗೋ (2024) ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಡ್ಯುಯಲ್ ಫ್ಲ್ಯಾಷ್ ಜೊತೆಗೆ AI ಲೆನ್ಸ್ ಅನ್ನು ಒಳಗೊಂಡಿದೆ. ಹಾಗೆಯೇ ಇದು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಟೆಕ್ನೋ ಸ್ಪಾರ್ಕ್ ಗೋ (2024) ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯವನ್ನು ಒಳಗೊಂಡಿದ್ದು, ಇದು 10W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್ ಬಯೋಮೆಟ್ರಿಕ್ ಅನ್‌ಲಾಕಿಂಗ್‌ಗಾಗಿ ಫಿಂಗರ್‌ಪ್ರಿಂಟ್ ಸೆನ್ಸಾರ್, ಹಾಗೆಯೇ DTS ಸೌಂಡ್ ತಂತ್ರಜ್ಞಾನದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳ ಆಯ್ಕೆಗಳು ಇವೆ.
ಟೆಕ್ನೋ ಸ್ಪಾರ್ಕ್ ಗೋ (2024) ಮೊಬೈಲ್ ಬೇಸ್ ಮಾಡೆಲ್ 3GB RAM + 64GB ಸ್ಟೋರೇಜ್, 8GB RAM + 64GB ಸ್ಟೋರೇಜ್ ಮತ್ತು 8GB RAM + 128GB ಸ್ಟೋರೇಜ್ ಮಾದರಿಗಳ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಗ್ರಾವಿಟಿ ಬ್ಲಾಕ್ ಮತ್ತು ಮಿಸ್ಟರಿ ವೈಟ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsAppGroup:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1