ಚಿತ್ರದುರ್ಗ ಸೆ. 25
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಸಾರ್ವಜನಿಕರು ತಾವು ನೆಲೆಸಿರುವ ಸ್ಥಳಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಕೃತ್ಯಗಳು ನಡೆದಾಗ ಅಂಜಿಕೆಯಿಲ್ಲದೆ ಧೈರ್ಯವಾಗಿ ಸಂಬಂಧಿಸಿದ ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಭ್ರಷ್ಟಾಚಾರ ನಿಗ್ರಹಕ್ಕೆ ಕೈಜೋಡಿಸಬೇಕು ಎಂದು ಚಿತ್ರದುರ್ಗ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿ ಎನ್.ಮೃತ್ಯುಂಜಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಚಿತ್ರದುರ್ಗ ತಾಲ್ಲೂಕಿನ ಮದಕರಿಪುರದಲ್ಲಿ ಹಮ್ಮಿಕೊಂಡಿರುವ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಏಳು ದಿನಗಳ ವಿಶೇಷ ವಾರ್ಷಿಕ ಶಿಬಿರದ ಬುಧವಾರ ಕಾರ್ಯಕ್ರಮವನ್ನು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು. ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಭ್ರಷ್ಟಾಚಾರದ ವಿರುದ್ಧ ದೂರು ನೀಡುವುದು ರಾಷ್ಟ್ರೀಯ ಸೇವಾ ಯೋಜನೆಯ ಒಂದು ಭಾಗವಾಗಿದೆ.ಹೀಗಾಗಿ ಸ್ವಸ್ಥ ಸಮಾಜ ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ನಿಮ್ಮಲ್ಲೆರ ಭಾಗವಹಿಸುವಿಕೆ ಅತಿ ಮುಖ್ಯವಾಗಿದೆ ಎಂದರು.
ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಆರ್.ಮಲ್ಲೇಶ್ ಮಾತನಾಡಿ ಶಿಕ್ಷಣದೊಂದಿಗೆ ಸೇವೆ ಮತ್ತು ವ್ಯಕ್ತಿತ್ವ ವಿಕಸನ ಎಂಬ ಎರಡು ಧ್ಯೇಯಗಳೊಂದಿಗೆ ಗಾಂಧೀಜಿಯವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ 1969 ಸೆಪ್ಟೆಂಬರ್24 ರಂದು ರಾಷ್ಟ್ರೀಯ ಸೇವಾ ಯೋಜನೆ ಅನುಷ್ಠಾನಗೊಂಡಿತು.ಇಂದು ಸೆಪ್ಟೆಂಬರ್ 24 ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯ ದಿನದಂದು ವಿಶೇಷ ವಾರ್ಷಿಕ ಶಿಬಿರ ಆಯೋಜಿಸಿರುವುದು ವಿಶೇಷ.ನಿಮ್ಮ ಬದುಕಿಗೆ ಈ ದಿನ ಹೊಸ ತಿರುವು ನೀಡುವ ದಿನವಾಗಲಿ ಎಂದು ಆಶಿಸಿ ಶುಭ ಕೋರಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪಿ.ಎ. ಸಣ್ಣಪಾಲಯ್ಯ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಾಂತಿ,ಶಿಸ್ತು ಸಹನೆ,ಸೌಹಾರ್ದತೆ,ಕ್ರಿಯಾಶೀಲತೆ,ಮಾತುಗಾರಿಕೆ ಹಾಗೂ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಲು ಎನ್ ಎಸ್ ಎಸ್ ಶಿಬಿರಗಳು ಉತ್ತಮ ವೇದಿಕೆಯನ್ನು ಒದಗಿಸಿಕೊಡುತ್ತವೆ.
ಇದರ ಸದುಪಯೋಗ ಪಡೆದುಕೊಂಡು ಭವ್ಯ ಭಾರತದ ಭಾವಿ ಪ್ರಜೆಗಳಾಗಿ ಎಂದು ಕರೆ ನೀಡಿದರು.
ಸಮಾರಂಭದಲ್ಲಿ ಮದಕರಿಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಭವ್ಯ ಹೆಚ್.ಎಸ್.ಸಿದ್ದರಾಮ, ಪಂಚಾಯತಿ ಸದಸ್ಯರಾದ ಶ್ರೀ ಸ್ವಾಮಿ,ಮಂಜುನಾಥ, ಎಂ.ಡಿ.ರಂಜಿತ್,ನವೀನ್ ಕುಮಾರ್, ಪಿಡಿಓ ನಾಗರಾಜ, ಉಪನ್ಯಾಸಕರಾದ ಹೆಚ್.ಶ್ರೀನಿವಾಸ್, ಶ್ರೀಮತಿ ಆರ್.ಚಂದ್ರಿಕಾ,ಮಂಜುನಾಥ,ಬಸವರಾಜ,ಹೆಚ್.ಶಿವಕುಮಾರ್, ಕೆ.ನಾಗರಾಜ್,ನೌಕರ ಸಂಘದ ಸದಸ್ಯರಾದ ಎ.ನಾಗರಾಜ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು
ಆರಂಭದಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಗೂ ಎನ್ ಎಸ್ ಎಸ್ ಗೀತೆ ಹಾಡುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು.
ಶಿಬಿರಾಧಿಕಾರಿಗಳಾದ ಟಿ. ಪೆನ್ನಯ್ಯ ಪ್ರಾಸ್ತಾವಿಕ ಮಾತನಾಡಿದರು.ಡಾ.ತಿಪ್ಪೇಸ್ವಾಮಿ ಸ್ವಾಗತಿಸಿದರು, ರಂಗಸ್ವಾಮಿ ವಂದಿಸಿದರು.ರಾಜಭಕ್ಷಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.ಕೊನೆಯಲ್ಲಿ ವಿದ್ಯಾರ್ಥಿನಿಯರು ಮನರಂಜನಾ ಕಾರ್ಯಕ್ರಮ ನಡೆಸಿಕೊಟ್ಟರು.
Views: 8