ಅತಿಥಿ ಉಪನ್ಯಾಸಕರ ಖಾಯಂ ಇಲ್ಲ: ಸದನದಲ್ಲಿ ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ!

ಅತಿಥಿ ಉಪನ್ಯಾಸಕರ ಖಾಯಂ ಮಾಡುವಂತೆ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಅ.ದೇವೇಗೌಡ ಮಾಡಿದ ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಸರ್ಕಾರದ ಕಡೆಯಿಂದ ಉನ್ನತ ಶಿಕ್ಷಣ ಸಚಿವ ಪ್ರತಿಕ್ರಿಯಿಸಿದ್ದು, ಅತಿಥಿ ಉಪನ್ಯಾಸಕರನ್ನು ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಸದನಕ್ಕೆ ಉತ್ತರ ನೀಡಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.

ಬೆಂಗಳೂರು, (ಫೆಬ್ರವರಿ 13): ಅತಿಥಿ ಉಪನ್ಯಾಸಕರನ್ನು (guest lecturers)ಖಾಯಂಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಚರ್ಚೆಯಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದ್ದು, ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ.

ವಿಧಾನ ಪರಿಷತ್‌ ಸದಸ್ಯ ಅ. ದೇವೇಗೌಡ ಅವರು ನಿಯಮ 72ರ ಅಡಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಗಮನ ಸೆಳೆಯುವ ಸೂಚನೆಯನ್ನು ಮಂಡಿಸಿದರು. ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್, ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ಸದನಕ್ಕೆ ಉತ್ತರ ನೀಡಿದರು.

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯ ವರದಿಯ ಪ್ರಕಾರ ಪರಿಶೀಲನೆ ಮಾಡಲಾಗಿದೆ. ವಿವಿಧ ಮಾನದಂಡದ ಆಧಾರದ ಮೇಲೆ ವೇತನ ನಿಗದಿ ಮಾಡಲಾಗಿದೆ. 32 ಸಾವಿರದಿಂದ 26 ಸಾವಿರದವರೆಗೂ ವೇತನ ನೀಡಲಾಗುತ್ತಿದೆ. ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅತಿಥಿ ಉಪನ್ಯಾಸಕರನ್ನು ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲ. ಬದಲಾಗಿ ಕಾಲೇಜುಗಳಲ್ಲಿ ಹೆಚ್ಚುವರಿ ಅವಧಿಗೆ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿ ತಾತ್ಕಾಲಿಕ ನೇಮಕ ಮಾಡಿಕೊಳ್ಳುತ್ತಿರುವುದಾಗಿ ಸ್ಪಷ್ಟನೆ ನೀಡಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *