
ಕೊಲ್ಕತ್ತಾ: ರಾಮನವಮಿಯ ಬಳಿಮ ದೀದಿ ನಾಡಲ್ಲಿ ಬೆಂಕಿಯ ಹೊಗೆಯಾಡುತ್ತಿದೆ. ನಿನ್ನೆ ರಾತ್ರಿಯೂ ಗಲಾಟೆ ನಡೆದಿದೆ. ಇಂದು ಹೌರಾ ಜಿಲ್ಲೆಯಲ್ಲಿ ಹಿಂಸಾಚಾರ ಸಂಭವಿಸಿದೆ. ಎರೆಉ ಗುಂಪುಗಳನಡುವೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಹೊತ್ತಿ ಉರಿದ ಪಶ್ಚಿಮ ಬಂಗಾಳ ಇನ್ನು ಕುಜಡ ಬೂದಿ ಮುಚ್ಚಿದ ಕೆಂಡದಂತಿದೆ. ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ವಾಹನಗಳು ಸುಟ್ಟು ಭಸ್ಮವಾಗಿದೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋಗಳೆಲ್ಲಾ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ರೈಲ್ವೆ ನಿಲ್ದಾಣದಲ್ಲಿಯೂ ಕಲ್ಲು ತೂರಾಟ ನಡೆಸಿದ್ದಾರೆ. ರೈಲು ಸಂಚಾರಕ್ಕೆ ಅಡಚಣೆ ಮಾಡಿದ್ದಾರೆ.
ಈ ಸಂಬಂಧ ಟಿಎಂಸಿಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಯುವಕರನ್ನು ಬಿಜೆಪಿ ಪ್ರಚೋದಿಸುತ್ತಿದೆ ಎಂದಿದ್ದಾರೆ.
The post ರಾಮನವಮಿ ಬಳಿಕ ಶುರುವಾದ ಹಿಂಸೆ ಇನ್ನು ನಿಂತಿಲ್ಲ : ಪಶ್ಚಿಮ ಬಂಗಾಳದಲ್ಲಿ ಇಂದು ಮತ್ತೆ ಗಲಾಟೆ..! first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/uL7yNAZ
via IFTTT
Views: 0