Dubai’s Al Maktoum International Airport to have world’s largest terminal: ದುಬೈನ ಅಲ್ಮಕ್ತೂಮ್ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ವಿಶ್ವದ ಅತಿದೊಡ್ಡ ಟರ್ಮಿನಲ್ ನಿರ್ಮಾಣವಾಗುತ್ತಿದೆ. ಈಗಿರುವ ದುಬೈ ಏರ್ಪೋರ್ಟ್ನಿಂದ 45 ಕಿಮೀ ದಕ್ಷಿಣದಲ್ಲಿರುವ ಅಲ್ಮಕ್ತೂಂ ವಿಮಾನ ನಿಲ್ದಾಣ ವಿಶ್ವದಲ್ಲೇ ಅತಿ ಬೃಹತ್ ಎನಿಸಲಿದೆ. ಇದರಲ್ಲಿ ಬರೋಬ್ಬರಿ 400 ಏರ್ಕ್ರಾಫ್ಟ್ ಗೇಟ್ ಮತ್ತು 5 ಪ್ಯಾರಲಲ್ ರನ್ವೇಗಳಿರುತ್ತವೆ. ಸುಮಾರು ಮೂರು ಲಕ್ಷ ಕೋಟಿ ರೂ ವೆಚ್ಚದಲ್ಲಿ ಈ ಏರ್ಪೋರ್ಟ್ ಸಿದ್ಧವಾಗಲಿದೆ. ಹಿಂದೆಂದೂ ಕಾಣದ ಏವಿಯೇಶನ್ ತಂತ್ರಜ್ಞಾನವನ್ನು ಈ ನಿರ್ಮಾಣ ಕಾರ್ಯದಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿಯನ್ನು ಯುಎಇ ದೊರೆ ನೀಡಿದ್ದಾರೆ.

ಯುಎಇ ನಾಡಿನ ದುಬೈನಲ್ಲಿರುವ ಅಲ್ಮಖ್ತೂಮ್ ಇಂಟರ್ನ್ಯಾಷನಲ್ ಏರ್ಪೋರ್ಟ್ (Al Maktoum International Airport) ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣವಾಗಿ ರೂಪುಗೊಳ್ಳಲಿದೆ. ದುಬೈನ ಈ ಎರಡನೇ ಏರ್ಪೋರ್ಟ್ನಲ್ಲಿ ಹೊಸ ಟರ್ಮಿನಲ್ ಸಿದ್ಧವಾಗುತ್ತಿದೆ. 35 ಬಿಲಿಯನ್ ಡಾಲರ್ ಅಂದಾಜು ವೆಚ್ಚದಲ್ಲಿ ಸಿದ್ದಗೊಳ್ಳಲಿರುವ ಇದು ವಿಶ್ವದಲ್ಲೇ ಅತಿದೊಡ್ಡ ಟರ್ಮಿನಲ್ ಆಗಿದೆ. ದುಬೈನ ದಕ್ಷಿಣ ಭಾಗದಲ್ಲಿರುವ ಮರುಭೂಮಿಯಲ್ಲಿ ಮುಂದಿನ 10 ವರ್ಷದಲ್ಲಿ ಈ ಏರ್ಪೊರ್ಟ್ ಸಿದ್ಧಗೊಳ್ಳಲಿದೆ. ವಿಶ್ವದ ಅತ್ಯಂತ ಬ್ಯುಸಿ ಏರ್ಪೋರ್ಟ್ಗಳಲ್ಲಿ ಒಂದಾಗಿರುವ ದುಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ತನ್ನ ಇಡೀ ಕಾರ್ಯಾಚರಣೆಗಳನ್ನು ಈ ಏರ್ಪೋರ್ಟ್ಗೆ ವರ್ಗಾಯಿಸಲಿದೆ.
‘ಭವಿಷ್ಯದ ತಲೆಮಾರುಗಳಿಗಾಗಿ ಹೊಸ ಏರ್ಪೋರ್ಟ್ ನಿರ್ಮಿಸುತ್ತಿದ್ದೇವೆ. ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿ ಖಾತ್ರಿ ಪಡಿಸುವ ಕೆಲಸ ಮಾಡುತ್ತಿದ್ದೇವೆ’ ಎಂದು ಯುಎಇ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಷೀದ್ ಅಲ್ ಮಖ್ತೂಮ್ ಹೇಳಿಕೆ ನೀಡಿದ್ದಾರೆ.
400 ಗೇಟ್ಗಳಿರುವ ಬೃಹತ್ ಟರ್ಮಿನಲ್
ದುಬೈನಲ್ಲಿ ಎರಡು ಏರ್ಪೋರ್ಟ್ಗಳಿವೆ. ದುಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ (ಡಿಎಕ್ಸ್ಬಿ) ಮತ್ತು ಅಲ್ಮಖ್ತೂಮ್ ಏರ್ಪೋರ್ಟ್ ಇವೆ. ವಿಶ್ವದ ಅತ್ಯಂತ ಬ್ಯುಸಿ ಏರ್ಪೋರ್ಟ್ಗಳಲ್ಲಿ ದುಬೈ ವಿಮಾನ ನಿಲ್ದಾಣ ಒಂದು. ಇಲ್ಲಿ ಸುಮಾರು 9 ಕೋಟಿ ಜನರು ವರ್ಷದಲ್ಲಿ ಬಂದು ಹೋಗುತ್ತಾರೆ. ಈ ಏರ್ಪೋರ್ಟ್ನಿಂದ 45 ಕಿಮೀ ದಕ್ಷಿಣಕ್ಕೆ ಅಲ್ಮಖ್ತೂನ್ ಏರ್ಪೋರ್ಟ್ ಇದೆ. 2010ಕ್ಕೆ ಆರಂಭವಾದ ಇದರಲ್ಲಿ ಸದ್ಯ ಒಂದು ಟರ್ಮಿನಲ್ ಮತ್ತು ಎರಡು ರನ್ವೇಗಳಿವೆ.
ಈಗ ಇರುವ ಯೋಜನೆಯಲ್ಲಿ ಅಲ್ಮಖ್ತೂನ್ ಏರ್ಪೋರ್ಟ್ನಲ್ಲಿ ಹೊಸ ಟರ್ಮಿನಲ್ ಸಿದ್ಧಗೊಳಿಸಲಾಗುತ್ತಿದೆ. ಇದು ವಿಶ್ವದಲ್ಲೇ ಅತಿದೊಡ್ಡ ಟರ್ಮಿನಲ್ ಆಗುತ್ತದೆ. 400 ವಿಮಾನ ಗೇಟ್ಗಳು ಇರಲಿವೆ. ಐದು ಪರ್ಯಾಯ ರನ್ವೇಗಳನ್ನು ನಿರ್ಮಿಸಲಾಗುತ್ತಿದೆ. ಇದು ಪೂರ್ಣವಾಗಿ ಸಿದ್ಧಗೊಂಡರೆ ದುಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಏನಿದೆ ಅದಕ್ಕಿಂತ ಐದು ಪಟ್ಟು ಬೃಹತ್ತಾಗಿರಲಿದೆ ಹೊಸ ಎರ್ಪೋರ್ಟ್. ಎರಡೂವರೆ ಕೋಟಿಗಿಂತಲೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವಷ್ಟು ಬೃಹತ್ತಾಗಿರಲಿದೆ ಇದು.
ಈ ಏರ್ಪೋರ್ಟ್ ನಿರ್ಮಾಣದಲ್ಲಿ ವಿಶ್ವದಲ್ಲೇ ಮೊದಲ ಬಾರಿಗೆ ಪ್ರಯೋಗವಾಗಲಿರುವ ಹೊಸ ಏವಿಯೇಶನ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆಯಂತೆ. ಏರ್ಪೋರ್ಟ್ ಸುತ್ತಲೂ ನಗರವನ್ನೂ ನಿರ್ಮಿಸಲಾಗುತ್ತಿದೆ. ಲಕ್ಷಾಂತರ ಮನೆಗಳೂ ಸುತ್ತಲೂ ನಿರ್ಮಾಣವಾಗಲಿವೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsAppGroup:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1