ಒಳಮೀಸಲಾತಿ ಸಮೀಕ್ಷೆಯಲ್ಲಿ ಹಲವು ಲೋಪ ದೋಷಗಳು ಉಂಟಾಗಿವೆ,ಇದನ್ನು ಬಗೆಹರಿಸಿ ಗಣತಿ ಕಾರ್ಯ ನಡೆಸುವಂತೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಬೆಂಗಳೂರು : ಒಳಮೀಸಲಾತಿ ಮನೆ ಮನೆ ಸಮೀಕ್ಷೆಯಲ್ಲಿ ಹಲವು ಲೋಪ ದೋಷಗಳು ಉಂಟಾಗಿವೆ. ಕೂಡಲೇ ಇದನ್ನು ಬಗೆಹರಿಸಿ ಗಣತಿ ಕಾರ್ಯ ನಡೆಸುವಂತೆ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದ ನಿಯೋಗ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಸಮಗ್ರ ಸಮೀಕ್ಷೆ ಆರಂಭವಾದ ದಿನದಿಂದಲೂ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸಂಚರಿಸಿ ಮಾಹಿತಿ ಪಡೆಯಲಾಗಿದೆ. ಈ ವೇಳೆ ಕೆಲವು ಲೋಪಗಳು ಕಂಡು ಬಂದಿವೆ ಎಂದು ಆಧಾರಸಹಿತವಾಗಿ ವಿವರಿಸಿದರು.

ಜಾತಿ ಕಾಲಂನಲ್ಲಿ ಆದಿ-ಕರ್ನಾಟಕ, ಆದಿ-ದ್ರಾವಿಡ, ಆದಿ-ಆಂಧ್ರ ಕಡ್ಡಾಯವಾಗಿ ಆಯ್ಕೆ ಮಾಡಿದ ನಂತರ ಉಪ ಜಾತಿಯನ್ನಾಗಿ ಭೋವಿ-ವಡ್ಡರ ಆಯ್ಕೆ ಮಾಡಬಹುದೆಂದು ಜನರಿಗೆ ತಪ್ಪು ಮಾಹಿತಿ ಗಣತಿದಾರರು ನೀಡುತ್ತಿದ್ದಾರೆ. ಜೊತೆಗೆ ಇದೇ ರೀತಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ವಲಸೆಯಲ್ಲಿ ವಾಸ ಮಾಡುತ್ತಿರುವ ಕುಟುಂಬದವರು ಆಧಾರ್ ಸಂಖ್ಯೆ ನೀಡಿದರು, ಗಣತಿದಾರರಿಗೆ ಪೆÇೀನ್ ಮಾಡಿ ಹೇಳಿದರು ಗಣತಿಯಲ್ಲಿ ಅವರನ್ನು ಪರಿಗಣಿಸುತ್ತಿಲ್ಲ. ಮಾಹಿತಿ ನೀಡಿದಾಗ ನಿಮ್ಮ ಪೆÇೀಟೊ ಬೇಕು ಎಂದು ಅವರ ಮಾಹಿತಿ ಪಡೆಯುತ್ತಿಲ್ಲ ಎಂದು ತಿಳಿಸಿದರು.

ಆಯೋಗವು ಪಡಿತರ ಚೀಟಿ, ಆಧಾರ್ ಕಾರ್ಡ್ ಯಾವುದಾದರು ಒಂದನ್ನು ಪಡೆದು ಸಮೀಕ್ಷೆ ನಡೆಸಬಹುದಾಗಿದೆ ಎಂದು ತಿಳಿಸಿದ್ದರು ಕೂಡಾ ಕೆಲವು ಕಡೆ ಸಮೀಕ್ಷೆದಾರರು ಕೇವಲ ಪಡಿತರ ಚೀಟಿಯನ್ನು ಪಡೆದು ಸಮೀಕ್ಷೆ ನಡೆಸುತ್ತಿದ್ದಾರೆ. ಪಡಿತರ ಚೀಟಿಯಲ್ಲಿ ಹೆಸರಿಲ್ಲದ ವ್ಯಕ್ತಿಗಳ ಮಾಹಿತಿಯನ್ನು ತಿರಸ್ಕರಿಸುತ್ತಿದ್ದಾರೆ ಎಂದರು.

ಹೊಸದಾಗಿ ವಿವಾಹವಾಗಿರುವ ಮತ್ತು ಹೊಸದಾಗಿ ಮನೆ ಕಟ್ಟಿಕೊಂಡಿರುವ ಅಥವಾ ಬೇರೆ ಇರುವ ಕುಟುಂಬಗಳ ಮಾಹಿತಿಯನ್ನು ಗಣತಿದಾರರು ತೆಗೆದುಕೊಳ್ಳುತ್ತಿಲ್ಲ. ಆಯೋಗವು ಭೋವಿ ಪದಕ್ಕೆ ಪರಿಶಿಷ್ಟ ಜಾತಿ ಕೋಡ್ ಸಂಖ್ಯೆ 23.1 ಎಂದು ಅವಕಾಶ ನೀಡಿದರು ಕೂಡಾ ಕೆಲವು ಕಡೆ ಎಸ್‍ಸಿ ಅಲ್ಲದವರು ಎಂದು ಸಮೀಕ್ಷೆಯಿಂದ ದೂರ ಉಳಿಯುವಂತೆ ಮಾಡುತ್ತಿದ್ದಾರೆ ಎಂದು ದೂರಿದರು.

ಪಡಿತರ ಚೀಟಿ ಹೊಂದಿರುವ ಕೆಲವು ಕುಟುಂಬದವರನ್ನು ಎಸ್‍ಸಿ ಇದ್ದರೂ ಎಸ್‍ಟಿ ಎಂದು ತೋರಿಸುತ್ತಿದ್ದಾರೆ. ಮತದಾನ ಚೀಟಿ ತೋರಿಸಿದರು ಸಹ ಅವರು ಇಲ್ಲಿನ ನಿವಾಸಿಗಳು ಅಲ್ಲವೆಂದು ಆನ್‍ಲೈನ್‍ನಲ್ಲಿ ತೋರಿಸುತ್ತಿದೆ ಎಂದು ಗಣತಿದಾರರು ಹೇಳುತ್ತಾರೆ. ಆಧಾರ್‍ಕಾರ್ಡ್ ವಿಳಾಸ ಕರ್ನಾಟಕ ಇದ್ದರೂ ಬೇರೆ ರಾಜ್ಯದವರು ಎಂದು ಗಣತಿದಾರರು ಹೇಳಿ ಅವರನ್ನು ಗಣತಿಯಿಂದ ಕೈಬಿಡುತ್ತಿದ್ದಾರೆ. ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿಗೆ, ಸರಿಯಾದ ತರಬೇತಿ ನೀಡಲಾಗಿಲ್ಲ, ಪರಿಣಾಮವಾಗಿ ಅವರು ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯನ್ನು ತತ್‍ಕ್ಷಣ ನಿಲ್ಲಿಸಿ ಅವರಿಗೆ ಮತ್ತೊಮ್ಮೆ ಒಂದು ದಿನದ ತರಬೇತಿ ನೀಡಬೇಕು ಎಂದು ಕೋರಿದರು.

ಆದಿಕರ್ನಾಟಕ, ಆಧಿದ್ರಾವಿಡ, ಆದಿಆಂಧ್ರ ಎಂದು ಜಾತಿಯನ್ನು ಗುರುತಿಸಿದಾಗ ಉಪಜಾತಿ ಕಾಲಂ ನಲ್ಲಿ ಭೋವಿ ವಡ್ಡರಿಗೆ ಸಂಬಂಧಿಸಿದ ಯಾವುದೆ ಜಾತಿಗಳು ತೋರಿಸದಂತೆ ಸದರಿ ಕಾಲಂನ್ನು ಅಭಿವೃದ್ಧಿಪಡಿಸಬೇಕು. ಹೀಗೆ ಹಲವಾರು ನ್ಯೂನ್ಯತೆಗಳನ್ನು ಕೂಡಲೇ ಸರಿಪಡಿಸಲು ಒತ್ತಾಯಿಸಿದರು.

ಸಮೀಕ್ಷೆ ನಡೆಸುತ್ತಿರುವ ಕೆಲ ಸಿಬ್ಬಂದಿ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನಮೂದಿಸುತ್ತಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ದೂರುಗಳು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸಮೀಕ್ಷೆಗೆ ನಿಗದಿಪಡಿಸಿರುವ ಕಾಲಮಿತಿ ಸಾಕಾಗುವುದಿಲ್ಲ. ದಯಾಳುಗಳಾದ ತಾವು ಮನೆ ಮನೆ ಸಮೀಕ್ಷೆ ಕಾಲಮಿತಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ಸ್ವಾಮೀಜಿ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಏಕ ಸದಸ್ಯ ವಿಚಾರಣಾ ಆಯೋಗ ನ್ಯಾ. ಡಾ.ಹೆಚ್.ಎನ್.ನಾಗಮೋಹನದಾಸ್ ಅವರಿಗೆ ಕರೆ ಮಾಡಿ ವಿಚಾರ ವಿನಿಮಯ ಮಾಡಿದರು.

ಭೋವಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಮಾಜಿ ಅಧ್ಯಕ್ಷ ಸೀತಾರಾಮ, ಹಾವೇರಿ ರವಿ ಪೂಜಾರ್, ಭೋವಿ ನಿಗಮದ ಮಾಜಿ ಸದಸ್ಯ ಕಾಳಘಟ್ಟ ಹನುಮಂತಪ್ಪ, ಡಾ.ಗಂಗಾಧರ ಇದ್ದರು.

Leave a Reply

Your email address will not be published. Required fields are marked *