ಮುಂಚಿನಂತೆ ಮೌಲ್ಯಾಂಕನ ಪರೀಕ್ಷೆಗೆ ಸೂಚನೆ ಬೋರ್ಡ್ ಪರೀಕ್ಷೆ ಪ್ರಕರಣ ಕೋರ್ಟ್ಲ್ಲಿ

ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯ ದಲ್ಲಿ ವಿಚಾರಣೆ ಬಾಕಿ ಇರುವುದರಿಂದ 2024- 25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆ ಸಲು ಶಿಕ್ಷಣ ಇಲಾಖೆ ಸೂಚಿಸಿದೆ.
ಈ ಸಂಬಂಧ ಎಲ್ಲ ಶಾಲೆಗಳಿಗೂ ನಿರ್ದೇಶನ ನೀಡಿರುವ ಇಲಾಖೆ, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾ ನರಹಿತ ಖಾಸಗಿ ಶಾಲೆಗಳು 1ರಿಂದ 9ನೇತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಭಾಗ 1 ಮತ್ತು ಭಾಗ2ರಆಧಾರದಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಾಂಕನ ಪೂರ್ಣಗೊಳಿ ಸಬೇಕು. ಅಂತಿಮವಾಗಿ ಫಲಿತಾಂಶ ನಿರ್ಧರಿಸಲು ಆಂತರಿಕ ಮೌಲ್ಯಾಂಕನ ಅಂಕಗಳು ಮತ್ತು ಲಿಖಿತ ಪರೀಕ್ಷೆಯ (ಎಸ್‌ಎ-2) ಅಂಕಗಳನ್ನು ಪರಿಗಣಿಸ ಬೇಕು. 10ನೇ ತರಗತಿಗೆ ಮಾತ್ರ ಆಂತರಿಕ ಮೌಲ್ಯಾಂಕನ ಅಂಕಗಳುಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ನಡೆಸುವ ವಾರ್ಷಿಕ ಪರೀಕ್ಷೆಯ ಅಂಕಗಳನ್ನು ಫಲಿತಾಂಶವಾಗಿ ಪ್ರಕಟಿಸಬೇಕೆಂದು ಸೂಚಿಸಿದೆ.