![](https://samagrasuddi.co.in/wp-content/uploads/2024/01/image-138-1024x576.png)
Tulsi: ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ಪಡೆದಿರುವ ತುಳಸಿ ಸಸ್ಯವು ಹಲವು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ತುಳಸಿ: ಆಯುರ್ವೇದದಲ್ಲಿ ಪ್ರಮುಖ ಔಷಧೀಯ ಸಸ್ಯಗಳಲ್ಲಿ ಒಂದು ಎಂದು ಪರಿಗಣಿಸಲಾಗಿರುವ ತುಳಸಿ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
ತುಳಸಿ ದಳ: ಸಾಮಾನ್ಯ ಕೆಮ್ಮು, ನೆಗಡಿ ಸಂದರ್ಭದಲ್ಲಿ ಒಂದೆರಡು ತುಳಸಿ ದಳವನ್ನು ಜಗಿದು ತಿನ್ನುವುದರಿಂದ ಶೀಘ್ರದಲ್ಲೇ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ತುಳಸಿ ನೀರು: ಆಯುರ್ವೇದ ತಜ್ಞರ ಪ್ರಕಾರ, ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ನಿತ್ಯ ತುಳಸಿ ನೀರಿನ ಸೇವನೆಯಿಂದ ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳ ಬಗ್ಗೆ ತಿಳಿಯೋಣ…
ರೋಗನಿರೋಧಕ ಶಕ್ತಿ: ಮುಂಜಾನೆ ತುಳಸಿ ನೀರನ್ನು ಕುಡಿಯುವುದರಿಂದ ಇದು ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಶೀತ ಮತ್ತು ಕೆಮ್ಮು: ಚಳಿಗಾಲದಲ್ಲಿ ಜನರು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದರಲ್ಲೂ ಶೀತಕ್ಕೆ ಸಂಬಂಧಿಸಿದ ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿರುತ್ತದೆ. ಆದರೆ, ತುಳಸಿ ನೀರಿನ ಸೇವನೆಯು ನಿಮ್ಮನ್ನು ಶೀತ, ಕೆಮ್ಮಿನಿಂದ ದೂರ ಇರಿಸುತ್ತದೆ.
ಅಸಿಡಿಟಿ: ಗ್ಯಾಸ್ಟ್ರಿಕ್, ಅಸಿಡಿಟಿ ಸಮಸ್ಯೆ ಹೊಂದಿರುವವರಿಗೆ ಹಾಗೂ ಉದರ ಸಂಬಂಧಿತ ಸಾಮಾನ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ತುಳಸಿ ನೀರು ದಿವ್ಯೌಷಧವಾಗಿದೆ.
ಚರ್ಮದ ಸಮಸ್ಯೆಗಳು: ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಇದು ನಿಮ್ಮನ್ನು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ದೂರ ಉಳಿಯುವಂತೆ ಮಾಡುತ್ತದೆ. ಅದರಲ್ಲೂ, ಮುಖದ ಮೇಲಿನ ಮೊಡವೆಗಳನ್ನು ನಿವಾರಿಸುವಲ್ಲಿ ಇದು ಅತ್ಯುತ್ತಮ ಟಾನಿಕ್ ನಂತೆ ಕಾರ್ಯನಿರ್ವಹಿಸುತ್ತದೆ.
ಮಧುಮೆಹಿಗಳಿಗೆ ಪ್ರಯೋಜನಕಾರಿ: ಪ್ರತಿದಿನ ಮುಂಜಾನೆ ತುಳಸಿ ನೀರನ್ನು ಕುಡಿಯುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
ಮಂಡಿ ನೋವು: ನಿತ್ಯ ಮುಂಜಾನೆ ತುಳಸಿ ನೀರನ್ನು ಕುಡಿಯುವುದರಿಂದ ಇದು ಮೊಣಕಾಲಿನ ನೋವನ್ನು ಕೆಲವೇ ದಿನಗಳಲ್ಲಿ ಉಪಶಮನ ಮಾಡುತ್ತದೆ.
ಒತ್ತಡ ನಿವಾರಣೆ: ಆಯುರ್ವೇದ ತಜ್ಞರ ಪ್ರಕಾರ, ಪ್ರತಿ ದಿನ ತುಳಸಿ ನೀರನ್ನು ಕುಡಿಯುವುದರಿಂದ ನೀವು ಒತ್ತಡವನ್ನು ನಿವಾರಿಸಬಹುದು ಎಂದು ಹೇಳಲಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಸಮಗ್ರ ಸುದ್ದಿ ಇದನ್ನು ಖಚಿತಪಡಿಸುವುದಿಲ್ಲ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1