ಕೊನೆಗೂ ಅಭಿಮಾನಿಗಳ ಆಸೆ ಪೂರೈಸಿದ ಅಡೀಡಸ್! ಟೀಂ ಇಂಡಿಯಾ ವಿಶ್ವಕಪ್ ಜೆರ್ಸಿಯಲ್ಲಿ ಈ ಬದಲಾವಣೆ

Team India World Cup jersey: ಅಕ್ಟೋಬರ್ 5 ರಿಂದ ಭಾರತದ ನೆಲದಲ್ಲಿ ಪ್ರಾರಂಭವಾಗುವ ವಿಶ್ವಕಪ್ 2023 ಗಾಗಿ ಅಡೀಡಸ್ ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ.

Team India World Cup jersey: ಐಸಿಸಿ ಕ್ರಿಕೆಟ್ ವಿಶ್ವಕಪ್ ಅಕ್ಟೋಬರ್ 5ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿಯೇ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದ್ದು, ಒಟ್ಟು 48 ಪಂದ್ಯಗಳು ನಡೆಯಲಿವೆ. 2023ರ ಕ್ರಿಕೆಟ್ ವಿಶ್ವಕಪ್‌’ನ ಉದ್ಘಾಟನಾ ಪಂದ್ಯವು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ 5 ಅಕ್ಟೋಬರ್ 2023 ರಂದು ಅಹಮದಾಬಾದ್‌’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಆತಿಥ್ಯ ವಹಿಸಲಿರುವ ಈ ಹೈ ಪ್ರೊಫೈಲ್ ಕ್ರಿಕೆಟ್ ಪಂದ್ಯಾವಳಿಯ ಪಂದ್ಯಗಳ ಸಮಯವನ್ನು ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2.00 ಗಂಟೆಗೆ ಇಡಲಾಗಿದೆ.

ಅಕ್ಟೋಬರ್ 5 ರಿಂದ ಭಾರತದ ನೆಲದಲ್ಲಿ ಪ್ರಾರಂಭವಾಗುವ  ವಿಶ್ವಕಪ್ 2023 ಗಾಗಿ ಅಡೀಡಸ್ ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಇನ್ನು ಜೆರ್ಸಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಡ್ಯಾಶಿಂಗ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಕಿಟ್ ಪ್ರಾಯೋಜಕ ಅಡಿಡಾಸ್ ಬುಧವಾರ, ಸೆಪ್ಟೆಂಬರ್ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ಕಾಣಿಸಿಕೊಂಡಿದ್ದಾರೆ. ಬಿಸಿಸಿಐ ಕೂಡ ಟೀಂ ಇಂಡಿಯಾದ ಹೊಸ ಜೆರ್ಸಿಯ ವಿಡಿಯೋ ಶೇರ್ ಮಾಡಿದೆ.

ICC ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದ್ದು, ಒಟ್ಟು 48 ಪಂದ್ಯಗಳು ನಡೆಯಲಿವೆ. ಇಲ್ಲಿಯವರೆಗೆ, ತನ್ನ 12 ಆವೃತ್ತಿಗಳಲ್ಲಿ, ಆಸ್ಟ್ರೇಲಿಯಾ ತಂಡವು ಗರಿಷ್ಠ 5 ಬಾರಿ ವಿಶ್ವಕಪ್ ಗೆದ್ದಿದೆ. ಇದಲ್ಲದೆ ಭಾರತ ಮತ್ತು ವೆಸ್ಟ್ ಇಂಡೀಸ್ ತಲಾ ಎರಡು ಬಾರಿ ಮತ್ತು ಶ್ರೀಲಂಕಾ, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಲಾ ಒಂದು ಬಾರಿ ಪ್ರಶಸ್ತಿ ಗೆದ್ದಿವೆ.

2023 ರ ಕ್ರಿಕೆಟ್ ವಿಶ್ವಕಪ್‌’ನ ಉದ್ಘಾಟನಾ ಪಂದ್ಯವು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ 5 ಅಕ್ಟೋಬರ್ 2023 ರಂದು ಅಹಮದಾಬಾದ್‌’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ವಿಶ್ವಕಪ್ ಜರ್ಸಿಯಲ್ಲಿ ಈ ಬದಲಾವಣೆ:

ಭುಜದ ಮೇಲೆ ಮೂರು ಬಿಳಿ ಪಟ್ಟೆಗಳ ಬದಲಿಗೆ, ವಿಶ್ವಕಪ್‌’ನ ಹೊಸ ಜೆರ್ಸಿಯಲ್ಲಿ ಪ್ರತಿಯೊಬ್ಬ ಆಟಗಾರನ ಭುಜದ ಮೇಲೆ ಭಾರತೀಯ ತ್ರಿವರ್ಣ ಪಟ್ಟೆಗಳು ಇರುತ್ತವೆ.

Source : https://zeenews.india.com/kannada/sports/adidas-has-released-team-indias-new-jersey-for-the-world-cup-2023-162148

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

 WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *