RCB vs PBKS: ಐಪಿಎಲ್ 2025ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ತಮ್ಮ ಕೊನೆಯ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಕಾರಣ ಪಂದ್ಯಕ್ಕೆ ಸಾಕಷ್ಟು ಹೈಪ್ ಕ್ರಿಯೇಟ್ ಆಗಿದೆ. RCB ತವರಿನಲ್ಲಿ ಆಡಿರುವ ಎರಡು ಪಂದ್ಯಗಳನ್ನು ಸೋತಿರುವುದರಿಂದ ಈ ಪಂದ್ಯ ಅವರಿಗೆ ಪ್ರಮುಖವಾಗಿದೆ.

ಐಪಿಎಲ್ 2025 (IPL 2025) ರ 34 ನೇ ಪಂದ್ಯವು ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂದೆಡೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅಲ್ಪ ರನ್ಗಳಿಗೆ ಆಲೌಟ್ ಮಾಡಿ ಐತಿಹಾಸಿಕ ಜಯ ಸಾಧಿಸಿದ್ದರೆ, ಮತ್ತೊಂದೆಡೆ ಆರ್‌ಸಿಬಿ ಕೂಡ ರಾಜಸ್ಥಾನ್ ರಾಯಲ್ ವಿರುದ್ಧ 9 ವಿಕೆಟ್ಗಳಿಂದ ಏಕಪಕ್ಷೀಯ ಗೆಲುವು ಸಾಧಿಸಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದ ಮೇಲೆ ಎಲ್ಲರ ಕುತೂಹಲ ಹೆಚ್ಚಿದೆ. ಅಲ್ಲದೆ ತವರಿನಲ್ಲಿ ಆಡಿರುವ ಎರಡು ಪಂದ್ಯಗಳನ್ನು ಸೋತಿರುವ ಆರ್ಸಿಬಿಗೆ ಮತ್ತೊಮ್ಮೆ ತವರಿನಲ್ಲಿ ಅಗ್ನಿಪರೀಕ್ಷೆ ಎದುರಾಗಿದೆ.
ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯ ಯಾವಾಗ ನಡೆಯಲಿದೆ?
ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯ ಏಪ್ರಿಲ್ 17 ರಂದು ನಡೆಯಲಿದೆ.
ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯ ಎಲ್ಲಿ ನಡೆಯಲಿದೆ?
ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.
ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯ ಯಾವ ಚಾನೆಲ್ನಲ್ಲಿ ನೇರಪ್ರಸಾರ?
ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಹಾಗೂ ಜಿಯೋ ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದಾಗಿದೆ.
ಉಭಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ಪಂಜಾಬ್ ಕಿಂಗ್ಸ್: ಶಶಾಂಕ್ ಸಿಂಗ್, ಪ್ರಭಾಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್, ನೆಹಾಲ್ ವಧೇರಾ, ವಿಷ್ಣು ವಿನೋದ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಯುಜ್ವೇಂದ್ರ ಚಹಾಲ್, ಹರ್‌ಪ್ರೀತ್ ಬ್ರಾರ್, ಅರ್ಷ್‌ದೀಪ್ ಸಿಂಗ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಪ್ರಿಯಾಂಶ್ ಆರ್ಯ, ಅಜ್ಮತುಲ್ಲಾ ಒಮರ್ಜಾಯ್, ಆರನ್ ಹಾರ್ಡಿ, ಕ್ಸೇವಿಯರ್ ಬಾರ್ಟ್ಲೆಟ್, ಕುಲದೀಪ್ ಸೇನ್, ಸೂರ್ಯಾಂಶ್ ಶೆಡ್ಜ್, ಮುಶೀರ್ ಖಾನ್, ಹರ್ನೂರ್ ಪನ್ನು, ಪೈಲಾ ಅವಿನಾಶ್, ಪ್ರವೀಣ್ ದುಬೆ.
Source:TV9
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1