ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜು. 27 : ಸಿಎಂ ರಾಜೀನಾಮೆಗೆ ಬಿಜೆಪಿ ಪಟ್ಟು ವಿಚಾರಕ್ಕೆ ಪ್ರತಿಕ್ರಿಯಿಸಿ ಕೆಲ ರಾಜ್ಯದಲ್ಲಿ ಪಿಎಂ ಮೋದಿ ರಾಜೀನಾಮೆ ಕೇಳಲಾಗುತ್ತಿದೆ… ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ ಕೊಟ್ಟಿದ್ದಾರೆಯೇ.. ಎಂದು ಯೋಜನಾ & ಸಾಂಖ್ಯಿಕ ಇಲಾಖೆ & ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಬಿಜೆಪಿಯವರನ್ನು ಪ್ರಶ್ನಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಕಾಂಗ್ರೆಸ್ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾವಿರಾರು ಜನ ರೈತರು ಸಾವಿಗೀಡಾಗಿದ್ದಾರೆ ಪಿಎಂ ರಾಜೀನಾಮೆ ಕೊಟ್ಟಿದ್ದಾರಾ..? ರಾಮನಗರ ಹೆಸರು ಬದಲಿಸಿ ಬೆಂಗಳೂರು ದಕ್ಷಿಣ ವಿಚಾರಕ್ಕೆ ಪ್ರತಿಕ್ರಿಯಿಸಿ ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ. 2028ಕ್ಕೆ ಮತ್ತೆ ರಾಮನಗರ ಎಂದೇ ನಾಮಕರಣ ಎಂದು ಹೆಚ್.ಡಿ.ಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು ಅಧಿಕಾರಕ್ಕೆ ಬರಲಿ.ನೋಡೋಣ ಎಂದ ಸಚಿವರು ಗೃಹಲಕ್ಷ್ಮೀ ಯೋಜನೆ ಸೇರಿ ಯಾವ ಯೋಜನೆಯೂ ನಿಂತಿಲ್ಲ..ಹಣ ಡಿಬಿಟಿ ಆಗಬೇಕು.. ಕೆಲವೊಮ್ಮೆ ಹೆಚ್ಚು ಕಡಿಮೆ ಆಗುತ್ತದೆ. ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸುತ್ತಾರೆ ಎಂದರು.
ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕಡೆಗಣನೆ.ನೀರಾವರಿ, ಮೂಲ ಸೌಕರ್ಯ ಯೋಜನೆಗೂ ಹಣ ನೀಡಿಲ್ಲ.ಕೇಂದ್ರದ ಮಲತಾಯಿ ಧೋರಣೆ ಬಗ್ಗೆ ಎಚ್ಚರಿಕೆ ನೀಡುತ್ತಿದ್ದೇವೆ.ಹತ್ತು ವರ್ಷಗಳಿಂದ ಬಿಜೆಪಿಯಿಂದ ಸುಳ್ಳು ಪ್ರಚಾರ. ಜನರನ್ನು ಮರಳು ಮಾಡಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ.ಮಾಡಲು ಕೆಲಸ ಇಲ್ಲದ್ದಕ್ಕೆ ಬಿಜೆಪಿಯವರು ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಮುಡಾ ಹಗರಣ, ವಾಲ್ಮೀಕಿ ಹಗರಣ ತನಿಖೆಗೆ ಆದೇಶಿಸಲಾಗಿದೆ ಎಂದರು.