ಬಾಗಲಕೋಟೆ: ಸರಣಿ ಅಪಘಾತದಲ್ಲಿ ಮೂವರ ಸಾವು

ಬಾಗಲಕೋಟೆ, ಫೆಬ್ರವರಿ 01: ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ (Jamakandi) ತಾಲೂಕಿನ ಆಲಗೂರು ಗ್ರಾಮದ ಬಳಿ ಸಂಭವಿಸಿದ ಸರಣಿ‌ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮಹಾಂತೇಶ್ ಹೊನಕಟ್ಟಿ (35, ಬೆಳಗಾವಿ ಜಿಲ್ಲೆಯ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ (೪೨), ಜಮಖಂಡಿ ತಾಲ್ಲೂಕಿನ ಜಂಬಗಿ ಬಿಕೆ ಗ್ರಾಮದ ನಿವಾಸಿ ಆನಂದ ಬಾಡಗಿ (22) ಮೃತ ದುರ್ದೈವಿಗಳು.

ನಸುಕಿನ ಜಾವ ಜಮಖಂಡಿ‌ಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು. ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಜಾಗೂ ಟಾಟಾ ಏಸ್ ವಾಹನ ಪರಸ್ಪರ ಡಿಕ್ಕಿಯಾಗಿವೆ. ಟಾಟಾ ಏಸ್ ವಾಹನಕ್ಕೆ ಹಿಂಬದಿಯಿದ್ದ ಎರಡು ಬೈಕಗಳು ಡಿಕ್ಕಿ ಹೊಡೆದಿವೆ. ಸ್ಥಳಕ್ಕೆ ಜಮಖಂಡಿ‌ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್​​ಐ ಗಂಗಾಧರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Source : https://tv9kannada.com/karnataka/bagalkot/bagalkot-accident-3-killed-in-jamakhandi-chain-collision-kannada-news-vkb-972217.html

Leave a Reply

Your email address will not be published. Required fields are marked *