ಐಪಿಎಲ್ನಲ್ಲಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ.

RCB vs DC: ಐಪಿಎಲ್ 2025ರ ಭಾಗವಾಗಿ ಇಂದು ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಋತುವಿನಲ್ಲಿ ಅಕ್ಷರ್ ಪಾಟೇಲ್ ನೇತೃತ್ವದ ಡೆಲ್ಲಿ ತಂಡ ಆಡಿದ ಮೂರು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಮುಂದುವರೆದಿದೆ. ಆರ್ಸಿಬಿ ಕೂಡ ಉತ್ತಮ ಪ್ರದರ್ಶನ ತೋರುತ್ತಿದ್ದು ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಮಾತ್ರ ಸೋಲನ್ನು ಕಂಡಿದೆ.
ಸದ್ಯ, ಅಂಕಪಟ್ಟಿಯಲ್ಲಿ ಡೆಲ್ಲಿ ತಂಡ 6 ಪಾಯಿಂಟ್ಸ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಬೆಂಗಳೂರು ಕೂಡ 6 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಏತನ್ಮಧ್ಯೆ, ಇಂದಿನ ಪಂದ್ಯದಲ್ಲಿ ಆರ್ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವಿಶ್ವದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. ಈ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದರೆ ವಿರಾಟ್ ಟಿ20 ಸ್ವರೂಪದಲ್ಲಿ 100 ಅರ್ಧಶತಕ ಪೂರ್ಣಗೊಳಿಸಲಿದ್ದಾರೆ. ಹೀಗಾಗಿ, ಅವರು ಶಾರ್ಟ್-ಫಾರ್ಮ್ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಎರಡನೇ ಬ್ಯಾಟ್ಸ್ಮನ್ ಆಗಲಿದ್ದಾರೆ.

ಇನ್ನಿಂಗ್ಸ್ ವಿಚಾರದಲ್ಲಿ ವಿಶ್ವದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ. ಸದ್ಯ ಟಿ20ಯಲ್ಲಿ 100 ಅರ್ಧಶತಕಗಳನ್ನು ಪೂರೈಸಿದ ಏಕೈಕ ಆಟಗಾರ ಡೇವಿಡ್ ವಾರ್ನರ್ ಆಗಿದ್ದಾರೆ. ಮುಂಬೈ ವಿರುದ್ಧ ನಡೆದಿದ್ದ ಪಂದ್ಯದಲ್ಲಿ 13,000 ರನ್ಗಳ ಗಡಿ ತಲುಪಿದ್ದ ವಿರಾಟ್, ಇಂದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸಿದರೆ ಇತಿಹಾಸ ರಚಿಸಲಿದ್ದಾರೆ.
ವಿರಾಟ್ ಟಿ20 ದಾಖಲೆ: ವಿರಾಟ್ ಕೊಹ್ಲಿ ಈ ವರೆಗೂ ಟಿ20 ಕ್ರಿಕೆಟ್ನಲ್ಲಿ 386 ಇನ್ನಿಂಗ್ಸ್ಗಳನ್ನು ಆಡಿ 9 ಶತಕ ಮತ್ತು 99 ಅರ್ಧಶತಕಗಳ ಸಹಾಯದಿಂದ 13050 ರನ್ ಗಳಿಸಿದ್ದಾರೆ. ಟಿ20 ಸ್ವರೂಪದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಐದನೇ ಸ್ಥಾನದಲ್ಲಿದ್ದಾರೆ.

ಸಂಭಾವ್ಯ ತಂಡಗಳು – ಆರ್ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ದೇವದತ್ ಪಡಿಕ್ಕಲ್, ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ವುಡ್, ಯಶ್ ದಯಾಲ್, ರಸಿಖ್ ಸಲಾಂ/ಸುಯಶ್ ಶರ್ಮಾ.
ದೆಹಲಿ ಕ್ಯಾಪಿಟಲ್ಸ್: ಫಾಫ್ ಡು ಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್ಗುರ್ಕ್, ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಮೋಹಿತ್ ಶರ್ಮಾ/ಟಿ ನಟರಾಜನ್, ಮುಖೇಶ್ ಕುಮಾರ್.
ETV Bharat
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1