KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ (RPC) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 30, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸೆಪ್ಟೆಂಬರ್ 1 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.
![](https://samagrasuddi.co.in/wp-content/uploads/2023/09/image-67-300x200.png)
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ಲೋಕ ಸೇವಾ ಆಯೋಗ |
ಹುದ್ದೆ | ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ (RPC) |
ಒಟ್ಟು ಹುದ್ದೆ | 230 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 33,450-62,600 |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಸೆಪ್ಟೆಂಬರ್ 30, 2023 (ನಾಳೆ) |
ಉಳಿಕೆ ಮೂಲವೃಂದದ ಗ್ರೂಪ್ ‘ಸಿ’ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರವೀಕ್ಷಕರ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ವಿದ್ಯಾರ್ಹತೆ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
PH/ ವಿಧವಾ ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/ ಪ್ರವರ್ಗ-1 & PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ.
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ.
ಸಾಮಾನ್ಯ ಅಭ್ಯರ್ಥಿಗಳು- 600 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ಮಾಸಿಕ ₹ 33,450-62,600
ಉದ್ಯೋಗದ ಸ್ಥಳ:
ಕರ್ನಾಟಕ
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 30, 2023
ಕನ್ನಡ ಭಾಷಾ ಪರೀಕ್ಷೆ ನಡೆಯುವ ದಿನಾಂಕ: ನವೆಂಬರ್ 4, 2023
ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನ: ನವೆಂಬರ್ 5, 2023
ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ.
ಕೇಂದ್ರ ಕಚೇರಿ ಮಾಹಿತಿ ಕೇಂದ್ರ ಮತ್ತು ಸಹಾಯವಾಣಿ ಸಂಖ್ಯೆ: 080-30574957/30574901
ಪ್ರಾಂತೀಯ ಕಛೇರಿ ಮೈಸೂರು: 0821-2545956
ಪ್ರಾಂತೀಯ ಕಛೇರಿ ಬೆಳಗಾವಿ: 0831-2475345
ಪ್ರಾಂತೀಯ ಕಛೇರಿ ಕಲಬುರಗಿ: 08472-227944
ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1