ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನಲ್ಲಿ IPL ಪಂದ್ಯ, ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನಲ್ಲಿ IPL ಪಂದ್ಯ, ಈ ಮಾರ್ಗದಲ್ಲಿ  ಸಂಚಾರ ನಿರ್ಬಂಧ
Traffic advisory issued ahead of RCB vs MI match In Bengaluru Chinnaswamy Stadium On today April 10th

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಇಂದು (ಏಪ್ರಿಲ್ 10) ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೆಣಸಾಡಲಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರ್​ಸಿಬಿ ಅಭಿಮಾನಿಗಳ ಸಂಖ್ಯೆ ಅತ್ಯಧಿಕವಾಗಿರುವುದರಿಂದ ನಾಳಿನ ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುತ್ತಾರೆ. ಹೀಗಾಗಿ ವಾಹನ ಸವಾರರ ಸುಗಮ ಸಂಚಾರಕ್ಕಾಗಿ ನಗರ ಸಂಚಾರ ಪೊಲೀಸ್ ಇಲಾಖೆ ಸಂಚಾರ ಮಾರ್ಗದಲ್ಲಿ ಬದಮಾವಣೆ ಮಾಡಿದೆ. ಮಾರ್ಗ ಬದಲಾವಣೆಯು ಪಂದ್ಯ ನಡೆಯುವ ದಿನ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಇರಲಿದೆ. ನಂತರ ಎಂದಿನಂತೆ ಎಲ್ಲಾ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್‌ನ್ನು ನಿರ್ಬಂಧಿಸಲಾಗಿದೆ.

ಈ ಮಾರ್ಗದಲ್ಲಿ ಸಂಚಾರಕ್ಕೆ ನಿರ್ಬಂಧ

ಎಂಜಿ ರೋಡ್, ಕ್ವೀನ್ಸ್ ರೋಡ್, ಎಂಜಿ ರೋಡ್​ನಿಂದ ಕಬ್ಬನ್ ರೋಡ್, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರೋಡ್, ಕಬ್ಬನ್ ರೋಡ್, ಸೆಂಟ್ ಮಾರ್ಕ್ಸ್ ರೋಡ್, ಮ್ಯೂಸಿಯಂ ರೋಡ್, ಕಸ್ತುರ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ಸರ್ಕಲ್, ಲ್ಯಾವೆಲ್ಲೆ ರೋಡ್, ವಿಠಲ್ ಮಲ್ಯ ರೋಡ್, ನೃತತುಂಗ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಸಂಚಾರಿ ಪೊಲೀಸ್ ತಿಳಿಸಿದೆ. ವಾಹನ ಸವಾರರು ಸಂಜೆ 4 ಗಂಟೆಯಿಂದ 10 ಗಂಟೆ ವರೆಗೆ ಈ ರಸ್ತೆ ಮಾರ್ಗಗಳನ್ನು ಬಳಸದೆ ಬೇರೆ ಮಾರ್ಗಗಳಲ್ಲಿ ಸಂಚರಿಸಿ ಎಂದು ವಾಹನ ಸವಾರರಿಗೆ ಮನವಿ ಮಾಡಿದೆ.

ಪಾರ್ಕಿಂಗ್ ವ್ಯವಸ್ಥೆ

ಕಿಂಗ್ಸ್ ರಸ್ತೆ, ಬಿಆರ್​ಬಿ ಮೈದಾನ, ಕಂಠೀರವ ಕ್ರೀಡಾಂಗಣ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಓಲ್ಡ್​ ಕೆಜಿಯಡಿ ಬಿಲ್ಡಿಂಗ್ ಸಮೀಪ ವಾಹನಗಳನ್ನು ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಐಪಿಎಲ್​ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡಿದ್ದ ಆರ್​ಸಿಬಿ (RCB) ತಂಡವು 2ನೇ ಪಂದ್ಯದಲ್ಲಿ ಕೆಕೆಆರ್ (KKR) ವಿರುದ್ಧ ಹೀನಾಯವಾಗಿ ಸೋಲನುಭವಿಸಿತ್ತು. ಇದೀಗ ತವರು ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

source https://tv9kannada.com/karnataka/bengaluru/traffic-advisory-issued-ahead-of-rcb-vs-mi-match-in-bengaluru-chinnaswamy-stadium-on-today-april-10th-rbj-au58-552773.html

Leave a Reply

Your email address will not be published. Required fields are marked *