ಮರಕ್ಕೆ ಡಿಕ್ಕಿ ಹೊಡೆದು ಕ್ರೂಸರ್ ಪಲ್ಟಿ: ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಜನರಿಗೆ ಗಾಯ.

ಬೆಳಗಾವಿ: ಕ್ರೂಸ್‌ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ಬಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿತು. ಚುಂಚನೂರು ಗ್ರಾಮದ ಕೆಂಚಪ್ಪ ಈರಣ್ಣವರ(50) ಸ್ಥಳದಲ್ಲೇ ಮೃತಪಟ್ಟರೆ, 16 ವರ್ಷದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಜನರು ಹತ್ತಿ ಬಿಡಿಸುವ ಕೆಲಸಕ್ಕೆಂದು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಸ್ವಗ್ರಾಮ ಚುಂಚನೂರಿಗೆ ತೆರಳುತ್ತಿದ್ದಾಗ ಅಪಘಾತ ಘಟಿಸಿದೆ. ಕ್ರೂಸರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು‌. ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Source : https://www.etvbharat.com/kn/!state/curiser-overturned-near-savadatti-2-died-karnataka-news-kas24112100580

Leave a Reply

Your email address will not be published. Required fields are marked *