ಚಿತ್ರದುರ್ಗ ಜು. 09
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಅಲ್ಪಸಂಖ್ಯಾತರ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಕೌಶಲ್ಯಾಭಿವೃದ್ಧಿ, ತಂತ್ರಜ್ಞಾನ ಆಧಾರಿತ ಉದ್ಯಮಗಳಿಗೆ ಸಾಲ, ಸೌಲಭ್ಯ ಹಾಗೂ ಗ್ರಾಮೀಣ ಭಾಗದ ಮೂಲಸೌಕರ್ಯಗಳನ್ನು ಬಲಪಡಿಸಲು ಕ್ರಮವಹಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹ್ಮದ್ ತಿಳಿಸಿದರು.

ಚಿತ್ರದುರ್ಗ ನಗರದ ಪಾರ್ಶ್ವನಾಥ ವಿದ್ಯಾ ಸಂಸ್ಥೆಗೆ ಗುರುವಾರ ಭೇಟಿ ನೀಡಿ ಆಡಳಿತ ಮಂಡಳಿಯ ಕಾರ್ಯ ವೈಖರಿಯನ್ನು ಪರೀಶೀಲಿಸದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಸಂಸ್ಥೆಗಳಿಗೆ ನೇರವಾಗಿ ಸರ್ಕಾರದಿಂದ ಅನುದಾನ ನೀಡಲು ಅವಕಾಶವಿರುವುದಿಲ್ಲ. ಅವುಗಳ ಅಭಿವೃದ್ಧಿ ಸಮುದಾಯದ ಜವಾಬ್ದಾರಿಯಾಗಿರುತ್ತದೆ. ಆದಾಗ್ಯೂ, ಈ ವರ್ಷ ಇಲಾಖೆಯಿಂದ 100 ಮದರಸಾಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಉಳಿದಂತ ನಿಯಮಿತ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳು ಮುಂದುವರಿಯಲಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೆಶಕರಾದ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗೀರಿಜಾ, ವಿಷಯ ಪರೀವೀಕ್ಷಕರಾದ ರಂಗನಾಯ್ಕ್, ನಗರಸಭೇಯ ಆಯುಕ್ತರಾದ ಶ್ರೀಮತಿ ಲಕ್ಷ್ಮೀ, ಶಾಲಾ ಆಧ್ಯಕ್ಷರಾದ ಬಾಬುಲಾಲ್ ಜೀ, ಕಾರ್ಯದರ್ಶಿ ಸುರೇಶ್ ಕುಮಾರ್, ಸಲಹಾ ಸಮಿತಿ ನಿರ್ದೆಶಕರಾದ ಸುರೇಶ್ ಮುತ್ತ, ಜುವೇರಿಲಾಲ್, ಅಶಿಕ್ ಕುಮಾರ್, ವಿಕ್ರತ್ ಜೈನ್, ವಿಫುಲ್ ಜೈನ್, ಮಹಾವೀರ ಜೈನ್, ಖಂಜಾಚಿ ರಾಜೇದ್ರದಲೇಶ್, ಮಾಜಿ ಉಪಾಧ್ಯಕ್ಷರಾದ ಉತ್ತಮ ಚಂದ್ ಸುರಾನ ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಯರು, ಭೋಧಕರು ಭೋದಕೇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಿಗೆ 615 ಅಂಕಗಳನ್ನುಗಳಿಸಿದ ಶಾಲೆಯ ವಿದ್ಯಾರ್ಥಿ ಕುಮಾರಿ ತಸ್ಮಿಯಾ ನಸೀಬ್ ಇವರನ್ನು ಸನ್ಮಾನಿಸಲಾಯಿತು.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j