ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ಏಪ್ರಿಲ್ 30ರ ಬೆಳಿಗ್ಗೆ 11.00ರಿಂದ ಮೇ 07ರ ಬೆಳಿಗ್ಗೆ 11.00 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಲಾಗಿದೆ.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಯುಜಿಸಿಇಟಿ-2024 ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ಮೇ 7ರವರೆಗೆ ಅವಕಾಶ ಕಲ್ಪಿಸಲಾಗಿದೆ. ನೀವೂ ಕೂಡ ಈ ಬಾರಿ ಪರೀಕ್ಷೆ ಬರೆದಿದ್ದರೆ ನಿಮಗೂ ಕೆಲವು ಅನುಮಾನಗಳು ಅಥವಾ ತಪ್ಪು ಉತ್ತರಗಳು ಕಂಡು ಬಂದು ಗೊಂದಲ ಉಂಟಾದಲ್ಲಿ ನೀವು ಆಕ್ಷೇಪಣೆ ಸಲ್ಲಿಸಬಹುದು. ಆದರೆ ನಿಗದಿತ ದಿನಾಂಕದೊಳಗೆ ನೀವು ಆಕ್ಷೇಪಣೆಯನ್ನು ಸಲ್ಲಿಸಬೇಕಾಗುತ್ತದೆ. ಈ ಸಂಗತಿ ನೆನಪಿನಲ್ಲಿಟ್ಟುಕೊಂಡು ಮುಂದುವರೆಯಿರಿ. ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ.
ಸಿಇಟಿ-2024ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು
ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ಕೆಇಎ ವೆಬ್‌ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ಏಪ್ರಿಲ್ 30ರ ಬೆಳಿಗ್ಗೆ
11.00ರಿಂದ ಮೇ 07ರ ಬೆಳಿಗ್ಗೆ 11.00 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಲಾಗಿದೆ.
ಪಠ್ಯ ಹೊರತಾದ ಪ್ರಶ್ನೆಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆಗಳ ವಿವರ ಹಾಗೂ ಪೂರಕ ಕಾರಣಗಳನ್ನು
ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳನ್ನು ಅಂತಿಮವೆಂದು ಪರಿಗಣಿಸಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ ನೋಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.
ಸಿಇಟಿ ಔಟ್ ಆಫ್ ಸಿಲಬಸ್ ವಿಚಾರವಾಗಿ ಈಗಾಗಲೇ ಸಾಕಷ್ಟು ಚರ್ಚೆಗಳಾಗಿದೆ. ಈ ವಿರುದ್ದ ಹಲವರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಸಹ ಮಾಡಿದ್ದಾರೆ. KEA ನಿರ್ದೇಶಕರ ತಲೆದಂಡಕ್ಕೆ ಈಗ ಒತ್ತಡ ಇನನ್ಷ್ಟು ಹೆಚ್ಚಾಗಿದೆ. ಸಿಇಟಿ ಪ್ರಶ್ನೆ ಪತ್ರಿಕೆ ರಚಿಸುವಲ್ಲಿ ಕೆಇಎ ಎಡವಟ್ಟು ಮಾಡಿದೆ. ಇದಕ್ಕೆ ನೇರಾ ಕಾರಣ ಕೆಇಎ ನಿರ್ದೇಶಕಿ ರಮ್ಯಾ ಎಂದು ಹೇಳಲಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗುತ್ತಿದೆ. ಆದರೆ ಮುಂದೆ ಏನಾಯ್ತು ಎಂಬುದನ್ನು ನಾವು ನಿಮಗಿಲ್ಲಿ ನೀಡಿದ್ದೇವೆ ಗಮನಿಸಿ.
ಈ ಕೂಡಲೇ ರಮ್ಯಾ ಅವರನ್ನ ಸರ್ಕಾರ ಅಮಾನತು ಮಾಡಬೇಕು ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳ ಜೊತೆ ಕೆಇಎ ಚೆಲ್ಲಾಟವಾಡಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ತಜ್ಞರ ಸಮಿತಿ ವರದಿ ನೀಡಿದೆ. 50 ಪ್ರಶ್ನೆಗಳು ಔಟ್ ಆಫ್ ಸಿಲಬಸ್ ನಿಂದ ಬಂದಿದೆ ಎಂದು ತಿಳಿಸಲಾಗಿದೆ. ಈ ಪ್ರಶ್ನೆಗಳು ಗೊತ್ತೇ ಇಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsAppGroup:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Views: 0