ಲೇಖನ ✍️ -ಸುರೇಶ್ ಪಟ್ಟಣ್
ಸನಾತನ ಧರ್ಮದ ನೂತನ ವರ್ಷ ಯುಗಾದಿ
ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತ ಪರ್ವದಲ್ಲಿ ಬೇರೆ-ಬೇರೆ ಹೆಸರಿನಿಂದ, ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಯುಗಾದಿ ಹಬ್ಬವು ಹಿಂದುಗಳ ದೃಷ್ಷಿಯಲ್ಲಿ ಪವಿತ್ರವಾದ ದಿನವಾಗಿದ್ದು, ವರ್ಷದ ಪ್ರಾರಂಭ ದಿನವಾಗಿದೆ.

ಯುಗಾದಿಯ ಅರ್ಥ ‘ಯುಗದ ಆದಿ’. ಯುಗಾದಿ' ಎಂಬ ಶಬ್ದವು ಸಂಸ್ಕøತದ ಯುಗ’ ಮತ್ತು ಆದಿ' ಎಂಬ ಎರಡು ಶಬ್ದಗಳಿಂದ ಕೂಡಿದೆ. ಯುಗವೆಂದರೆ ಸೃಷ್ಟಿಯ ಕಾಲಮಾನ. ಅರ್ಥಾತ್ ಹೊಸ ವರ್ಷ; ಆದಿ ಎಂದರೆ ಆರಂಭ. ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಚೈತ್ರಶುದ್ಧ ಪಾಡ್ಯದಂದು ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದೂ, ಅಂದಿನಿಂದ ಕಾಲಗಣನೆಗಾಗಿ ಗ್ರಹ-ನಕ್ಷತ್ರ-ಮಾಸ-ಋತು-ವರ್ಷ ಇವುಗಳನ್ನು ಏರ್ಪಡಿಸಿದನೆಂದೂ ವ್ರತಖಂಡದಲ್ಲೂ ಪುರಾಣಗಳಲ್ಲೂ ಉಲ್ಲೇಖವಿದೆ. ಪಂಚಾಂಗಗಳೂ ಇದನ್ನೇ ಹೇಳುತ್ತವೆ. ವೇದಗಳ ಕಾಲದಿಂದಲೂ ಯುಗಾದಿಯ ಮಹಿಮೆ ಇವೆ. ಎಲ್ಲ ಶಾಸ್ತ್ರ, ಗ್ರಂಥಗಳಲ್ಲಿ ಯುಗಾದಿಯನ್ನು ಕುರಿತು ಹೇಳಲಾಗಿದೆ. ಶ್ರೀರಾಮನು ರಾವಣನನ್ನು ಸಂಹರಿಸಿ ಬಂದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪಟ್ಟಾಭಿಷೇಕವಾದ ದಿನ.
ಅಲ್ಲದೆ ಮಹಾಭಾರತದಲ್ಲಿ ಬರುವ ಚೀದಿರಾಜ್ಯದ ಅರಸು ವಸುವಿನ ಉಗ್ರ ತಪಸ್ಸಿಗೆ ಮೆಚ್ಚಿದ ಇಂದ್ರನು ವೈಜಯಂತಿ ಮಾಲೆಯನ್ನು ಅವನಿಗೆ ಕೊಟ್ಟು, ಚಿನ್ನದ ಕಲಶವುಳ್ಳ ಚಕ್ರಾಧಿಪತ್ಯದ ಧ್ವಜವನ್ನು ರಾಜನ ತಲೆಯ ಮೇಲೆ ಇಟ್ಟಿರುವ ದಿನವಾಗಿದೆ. ಪಂಚಾಂಗ ಮತ್ತು ಶಾಸ್ತ್ರದ ಪ್ರಕಾರ ಶುಭದಿನ ಹಾಗೂ ಅತ್ಯಂತ ಶುಭ ಮೂಹೂರ್ತದ ಮೂರುವರೆ ದಿನಗಳೆಂದರೆ ಯುಗಾದಿ, ವಿಜಯದಶಮಿ, ಬಲಿಪಾಡ್ಯಮಿ ಮತ್ತು ಅಕ್ಷಯ ತದಿಗೆ. ಅದರಲ್ಲಿ ಯುಗಾದಿ ಅತೀಶ್ರೇಷ್ಠ ಮೂಹೂರ್ತ ಎಂದು ಭಾರತಿಯರು ನಂಬುತ್ತಾರೆ. ವರ್ಷದ ಶುಭ ದಿನವಾದ ಯುಗಾದಿ ಮಂಗಳ ಕಾರ್ಯವನ್ನು ಮಾಡಲು ಯೋಗ್ಯ ದಿನವೆಂದು ಹೇಳುವರು. ಯುಗಾದಿ ಹಬ್ಬವು ಚಂದ್ರಮಾನ ಹಾಗೂ ಸೌರಮಾನ ಎಂಬ ಎರಡು ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸುರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನ ಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ. ಭೂಮಿಯಿಂದ ನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ನಿಧಾನವಾಗಿ ಸಂಚರಿಸಿದಂತೆ ಕಾಣುತ್ತದೆ. ಜ್ಯೋತಷ ಶಾಸ್ತ್ರದಂತೆ, ಮೊದಲ ನಕ್ಷತ್ರ ಅಶ್ವಿನಿ- ಅಂದರೆ ಮೇಷ ರಾಶಿಯ 0-13:20 ಡಿಗ್ರಿ. ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ. ಇದೇ ಚಂದ್ರಮಾನ ಯುಗಾದಿ. ಅಶ್ವಿನೀ ನಕ್ಷತ್ರಕ್ಕೆ ರವಿಯು ಸೂರ್ಯನು ಪ್ರವೇಶಿಸುವ ಕಾಲಕ್ಕೆ ಹೊಸವರ್ಷ ಎಂದು ಹೇಳುವರು. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಇದು ಏಪ್ರಿಲ್ 14 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗೆ ಚಾಂದ್ರಮಾನ ಸಂವತ್ಸರವಾಗುತ್ತದೆ. ರವಿಚಂದ್ರರ ಗತಿಯನ್ನವಲಂಬಿಸಿ 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ ಈ ಹಬ್ಬವನ್ನು ಭಾರತದಲ್ಲಿ ಬೇರೆ-ಬೇರೆ ಹೆಸರಿನಿಂದ ಆಚರಿಸುವರು.
ಕರ್ನಾಟಕದಲ್ಲಿ ಯುಗಾದಿ’, ಮಹಾರಾಷ್ಟ್ರದಲ್ಲಿ ಗುಢಿಪಾಡವಾ', ಆಂಧ್ರ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಹೊಸ ವರ್ಷದ ಹಬ್ಬ’ವೆಂದು, ಉತ್ತರ ಭಾರತದಲ್ಲಿ ಬೈಸಾಖಿ' ಎಂದು ಇದು ಆಚರಿಸಲ್ಪಡುತ್ತದೆ. ಹೊಸ ವರ್ಷದ ಪ್ರಾರಂಭದ ಸಂಕೇತವಾದ ಯುಗಾದಿಯನ್ನು ಬಡವ-ಬಲ್ಲಿದರೆಂಬ ತಾರತಮ್ಯವಿಲ್ಲದೇ ಎಲ್ಲಾ ಹಿಂದೂಗಳೂ ಆಚರಿಸುತ್ತಾರೆ. ರೈತರು ಎತ್ತುಗಳನ್ನು ಶೃಂಗರಿಸಿ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ವ್ಯಾಪಾರಿಗಳು ಹಾಗೂ ಇನ್ನಿತರರು ಕೂಡ ಅಂದಿನ ದಿನವೇ ಶುಭ ಕಾರ್ಯವನ್ನು ಮಾಡುತ್ತಾರೆ.ಯುಗಾದಿ’ ಬಂದಿತೆಂದರೆ ಎಲ್ಲಡೆಯಲ್ಲಿ ಸಂತೋಷ, ಸಂಭ್ರಮ ತುಂಬಿ ತುಳುಕುತ್ತಿರುತ್ತದೆ.
ಚೈತ್ರಮಾಸದಿಂದ ವಸಂತ ಋತು ಶುರುವಾಗುತ್ತದೆ. ವನಗಳೆಲ್ಲ್ಲ ಚಿಗುರಿ ಹೂ ಬಿಟ್ಟು ಯುಗಾದಿಯ ಹರ್ಷವನ್ನು ಬೀರುವವು. ಎಲ್ಲಿ ನೋಡಿದರೂ ಮರಗಿಡಬಳ್ಳಿಗಳು ಹಸಿರಾಗಿ ನಳನಳಿಸುತ್ತಿರುವುದು.
ಯುಗಾದಿಯ ದಿನ ಮುಂಜಾನೆ ಬೇವು ಮಿಶ್ರಿತ ನೀರಿನಿಂದ ಸ್ನಾನ ಮಾಡಿ, ಹೊಸಬಟ್ಟೆ ಧರಿಸಿ ತಂತಮ್ಮ ದೇವರನ್ನು ಪೂಜಿಸುತ್ತಾರೆ. ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಕೋಣೆಯ ಬಾಗಿಲಿಗೆ ಎಳೆಯ ಹಸಿರು ಮಾವಿನೆಲೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು ಸೆರಿಸಿ ತೋರಣವನ್ನು ಕಟ್ಟುವರು. ಮನೇಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಬೇವು-ಬೆಲ್ಲವು, ಸುಖ-ದುಃಖ, ರಾತ್ರಿ-ಹಗಲು ಇವುಗಳ ಸಂಕೇತಗಳಾಗಿವೆ. ಮಾನವರ ಬದುಕಿನಲ್ಲಿ ಸುಖ-ದುಃಖಗಳು ಅವಿಭಾಜ್ಯ ಅಂಶಗಳು. ಇವೆಲ್ಲವುಗಳೊಂದಿಗೆ ಸಮತೋಲನ ಕಾಯ್ದುಕೊಂಡೇ ಮನುಷ್ಯ ಬದುಕಬೇಕು. ಜೀವನ ಕಷ್ಟ-ಸುಖ. ನೋವು ನಲಿವುಗಳ ಸಮ್ಮಿಶ್ರಣವಾಗಿದೆ. ಇವೆರಡೂ ಒಟ್ಟಿಗೆ ಇರುವವು.
ಎರಡನ್ನೂ ಸಮದೃಷ್ಟಿಯಿಂದ ಸವಿಯುವುದನ್ನು ಕಲಿಯಲೆಂದೇ ಯುಗಾದಿಯಂದು ಬೇವು-ಬೆಲ್ಲವನ್ನು ತಿನ್ನಿಸುವರು. ಅಂದು ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೇಣಸು, ಬೇವು ಇತ್ಯಾದಿಗಳ ಮಿಶ್ರಣಮಾಡಿ ಉಟದ ಮೊದಲು ಸೇವಿಸುವರು. ನೋವು ನಲಿವು ಎರಡಕ್ಕೂ ನಾವು ಸ್ವಾಗತ ನೀಡಬೇಕು. ನಾವು ಬೇವಿನ ಸಮಾನವಾದ ದು:ಖ, ಅಶಾಂತಿಯ, ಪ್ರಪಂಚದಲ್ಲಿದ್ದರೂ ಬೆಲ್ಲದ ಸಮಾನವಾದ ಶಾಂತಿ, ಅತೀಂದ್ರಿಯ ಸುಖ, ಆತ್ಮೀಯತೆ, ಸ್ನೇಹ, ಮಧುರತೆಯ ಅನುಭವ ಮಾಡುವುದು ಎಂಬ ನಿಜ ಅರ್ಥವಾಗಿದೆ.
ಯುಗಾದಿಯಂದು ಇಷ್ಟದೇವತೆಯ ಪೂಜೆ ಮಾಡುವರು. ಆ ದಿನ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಕೆಲವು ಊರುಗಳಲ್ಲಿ ಪಂಚಾಂಗ ಶ್ರವಣವನ್ನು ಏರ್ಪಡಿಸುವರು. ಎಲ್ಲಾ ರಾಶಿಗಳ ಫಲಾಫಲಗಳನ್ನು ವಿವರಿಸುವರು.
ಪ್ರತಿ ವರ್ಷದಲ್ಲೂ ಬರುವ ಕಷ್ಟ-ನಷ್ಟ, ಮಳೆ-ಬೆಳೆ ವಿಚಾರವನ್ನು ಜನರು ವರ್ಷದ ಪ್ರಾರಂಭದಲ್ಲೇ ತಿಳಿದುಕೊಳ್ಳಬಹುದು. ಪಂಚಾಂಗ ಕೇಳುವುದರಿಂದ ಮಾನವನ ಆಯುಷ್ಯ ಹೆಚ್ಚಾಗುತ್ತದೆ. ರೋಗ-ಪಾಪಗಳು ನಾಶವಾಗಿ ಗಂಗಾ ಸ್ನಾನ ಮಾಡಿದಷ್ಟು ಫಲ ಸಿಗುತ್ತದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೇ ನವಗ್ರಹ ಪೂಜೆಗಳನ್ನು ಮಾಡುವರು ಹಾಗೂ ದಾನ ಮಾಡುವ ಸಂಪ್ರದಾಯಗಳೂ ಇರುವವು.
ಗುಜರಾತ್, ಮತ್ತು ಮಹಾರಾಷ್ಟ್ರದಲ್ಲಿ ಯುಗಾದಿಯ ದಿನ ಪ್ರತಿಯೊಂದು ಮನೆಯ ಮುಂದೆಯೂ ಗುಢಿಯನ್ನು ನಿಲ್ಲಿಸುವ ಪದ್ಧತಿ ಇರುವುದರಿಂದ ಯುಗಾದಿಯನ್ನು ‘ಗುಢಿಪಾಡವಾ’ ಎಂದು ಕರೆಯುವರು. ಗುಢಿ ಎಂದರೆ ದ್ವಜ. ಒಂದು ಕೋಲಿನ ತುದಿಗೆ ರೇಷ್ಮೆ ಬಟ್ಟ ಏರಿಸಿ, ಅದರ ಮೇಲೆ ಬೆಳ್ಳಿ ಅಥವಾ ಹಿತ್ತಾಳೆಯ ಸಣ್ಣ ಬಿಂದಿಗೆಯನ್ನು ಕಟ್ಟಿ ಬೇವು ಮತ್ತು ಮಾವಿನ ಎಲೆಗಳಿಂದ ಅಲಂಕರಿಸುವರು. ಮಹಾಭಾರತದಲ್ಲಿ ಇದರ ಪ್ರಸ್ತಾಪವಿದೆ. ಅಂದು ‘ಪುರಣಪೋಳಿ’ ಸಿಹಿಯನ್ನು ಮಾಡುವರು.
ಕರ್ನಾಟಕದಲ್ಲಿ ಹೊಳಿಗೆ, ಆಂಧ್ರದಲ್ಲಿ ಒಬ್ಬಟ್ಟು ಮಾಡುವ ಪದ್ಧತಿ ಇದೆ. ಕರಾವಳಿಯಲ್ಲಿ ಖಣಿ ಇಡುವ ಸಂಪ್ರದಾಯವಿದೆ. ಬಾಳೆಎಲೆಯ ಮೇಲೆ ಅಕ್ಕಿ ಹಾಕಿ ತೆಂಗಿನಕಾಯಿ, ಸೌತೆಕಾಯಿ, ಹೊಸ ಬಟ್ಟೆ, ರವಿಕೆ ಖಣ, ಚಿನ್ನ, ಬತ್ತದ ತೆನೆ, ಹಣ್ಣ್ಣು ಹಂಪಲು, ದೇವರ ಪ್ರತಿಮೆ ಜೋಡಿಸಿ ಒಂದು ಕನ್ನಡಿ ಮುಂದೆ, ದೇವರು ಸಮೆತ ಎಲ್ಲವು ಕಾಣುವ ಹಾಗೆ ಇಡುತ್ತಾರೆ. ಯುಗಾದಿಯ ಹಬ್ಬದಂದು ಬೆಳಿಗೆ ಎದದು ಪೂಜೆ ಮಾಡಿ, ಕನ್ನಡಿಯಲ್ಲಿ ದೇವರ ದರ್ಶನ ಪಡೆಯುತ್ತಾರೆ. ತದನಂತರ ದೇಗುಲಕ್ಕೆಹೋಗುವರು, ಸಿಹಿ ಉಟ, ಗುರು ಹಿರಿಯರ ಭೇಟಿ, ಪಂಚಾಂಗ ಶ್ರವಣ ಮಾಡುತ್ತಾರೆ.
ಯುಗಾದಿಯ ಮಾರನೆಯ ದಿನವೂ ಹಬ್ಬದ ವಾತಾವರಣವೇ ಇರುತ್ತದೆ. ಮುಂಜಾನೆ ಎದ್ದು ಸ್ನಾನ ಮಾಡಿ ಮಡಿಯುಟ್ಟು ದೇವರನ್ನು ಪೂಜಿಸಿ ಗುರುಹಿರಿಯರಿಗೆ ನಮಸ್ಕ್ಕರಿಸುವರು. ಅಂದು ‘ವರ್ಷ ತೊಡಕು’ ಎಂದು ಆಚರಿಸಲಾಗುತ್ತದೆ. ಅಂದರೆ ಸತ್ಕಾರ್ಯಗಳಿಗೋಸ್ಕರ ನಮ್ಮನ್ನು ತೊಡಗಿಸಿಕೊಳ್ಳುವ ದಿನ. ವರ್ಷವಿಡೀ ಸುಖ ನೀಡುವಂತೆ, ಕಷ್ಠ ನಿವಾರಿಸುವಂತೆ ದೇವರಲ್ಲಿ ಕೇಳಿಕೊಳ್ಳುವ ದಿವಸ. ಈ ದಿನ ಯಾರಿಗೆ ಎನನ್ನು ಪಡೆಯುವರೋ ಅದು ಇಡೀ ವರ್ಷದವರೆಗೆ ಇರುತ್ತದೆ ಎಂಬ ನಂಬಿಕೆ ಇದೆ. ಅಷ್ಟೇ ಅಲ್ಲದೇ ಅಂದು ಬಿದಿಗೆಯ ದಿನ ಚಂದ್ರದರ್ಶನ ಮಾಡುವರು.
ಯುಗಾದಿ' ಎಂಬ ಶಬ್ದವು ಸಂಸ್ಕøತದ ಯುಗ’ ಮತ್ತು ಆದಿ' ಎಂಬ ಎರಡು ಶಬ್ದಗಳಿಂದ ಕೂಡಿದೆ. ಸೃಷ್ಟಿ ನಾಟಕದಲ್ಲಿ ನಾಲ್ಕು ಯುಗಗಳು ಇವೆ. ಸತ್ಯಯುಗ, ತ್ರೇತಾಯುಗ, ದ್ವಾಪರಯುಗ, ಮತ್ತು ಕಲಿಯುಗ. ಆದಿ’ ಎಂದರೆ ಪ್ರಾರಂಭ, ಪೂರ್ವಕಾಲ ಎಂದಾಗುತ್ತದೆ.
ವರ್ತಮಾನ ಸಮಯ ಕಲಿಯುಗದ ಕೊನೆಯ ಹಾಗೂ ಸತ್ಯಯುಗದ ಸಂಗಮ ಸಮಯ, ಸಂಗಮಯುಗವಾಗಿದೆ. ಹೀಗೆ ಕಲಿಯುಗದ ಅಂಧಕಾರದ ರಾತ್ರಿಯನ್ನು ಸತ್ಯಯುಗದ e್ಞÁನದ ಬೆಳಕನ್ನಾಗಿ ಪರಿವರ್ತಿಸುವ ಉದಯ ಕಾಲವೇ `ಯುಗಾದಿ’. ಈ ಯುಗಾದಿಯ ಸಮಯದಲ್ಲಿ ನಿರಾಕಾರ ಶಿವನು ಪ್ರಜಾಪಿತ ಬ್ರಹ್ಮಾರವರ ಶರೀರದಲ್ಲಿ ಪ್ರವೇಶ ಮಾಡಿ, ಹೊಸ ಸೃಷ್ಟಿಯ ಸ್ಥಾಪನೆ ಮಾಡುವನು. ಕಲಿಯುಗದ ತಮೋಪ್ರಧಾನ ಮನುಷ್ಯಾತ್ಮರಿಗೆ ಸತ್ಯವನ್ನು ನೀಡಿ, ಅವರಿಗೆ ಸಹಜ ರಾಜಯೋಗವನ್ನು ಕಲಿಸಿ, ಅವರನ್ನು ಸ್ವರ್ಗ ಅಥವಾ ರಾಮರಾಜ್ಯಕ್ಕಾಗಿ ಬೇಕಾಗುವ ಶ್ರೀ ಲಕ್ಷ್ಮೀ-ನಾರಾಯಣ, ಶ್ರೀರಾಮ-ಸೀತೆಯರ ಸಮಾನ ದೇವಾತ್ಮರನ್ನಾಗಿ ಮಾಡುತ್ತಾನೆ. ಅದಕ್ಕಾಗಿಯೇ ರಾಮಾಯಣದಲ್ಲಿ ಇಂದ್ರನು ವ್ಶೆಜಯಂತಿ ಮಾಲೆಯನ್ನು ಹಾಗೂ ಚಿನ್ನದ ಕಲಶವನ್ನು ವಸುವಿಗೆ ನೀಡಿದ ದಿನವೆಂದು ಹೇಳಲಾಗುತ್ತದೆ.
