ಶಾಲೆಯಿಂದ ಮನೆಗೆ ಕರೆದೊಯ್ಯಲಾಗುತ್ತಿದ್ದ ಸ್ಕೂಲ್ ವ್ಯಾನ್ ನಿಂದ ಇಬ್ಬರು ವಿದ್ಯಾರ್ಥಿಗಳು ಕೆಳಗೆ ಬಿದ್ದಿರುವ ಘಟನೆ ಗುಜರಾತಿನ ವಡೋದರಾದಲ್ಲಿ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ತಮ್ಮ ಶಾಲಾ ಬ್ಯಾಗ್ ನೊಂದಿಗೆ ಕಾರಿನ ಹಿಂಬಾಗಿಲಿನಿಂದ ಹಠಾತ್ತನೆ ನಡುರಸ್ತೆಯಲ್ಲಿ ಬಿದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗುಜರಾತ್: ಶಾಲೆಯಿಂದ ಮನೆಗೆ ಕರೆದೊಯ್ಯಲಾಗುತ್ತಿದ್ದ ಸ್ಕೂಲ್ ವ್ಯಾನ್ ನಿಂದ ಇಬ್ಬರು ವಿದ್ಯಾರ್ಥಿಗಳು ಕೆಳಗೆ ಬಿದ್ದಿರುವ ಘಟನೆ ಗುಜರಾತಿನ ವಡೋದರಾದಲ್ಲಿ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ತಮ್ಮ ಶಾಲಾ ಬ್ಯಾಗ್ ನೊಂದಿಗೆ ಕಾರಿನ ಹಿಂಬಾಗಿಲಿನಿಂದ ಹಠಾತ್ತನೆ ನಡುರಸ್ತೆಯಲ್ಲಿ ಬಿದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆದಾಗ್ಯೂ, ಚಾಲಕ ವ್ಯಾನ್ ನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾನೆ. ಈ ಸಂಬಂಧ ನಿರ್ಲಕ್ಷ್ಯ ಆರೋಪದ ಮೇರೆಗೆ ಇಬ್ಬರ ವಿರುದ್ಧ ವಿವಿಧ ಸೆ7ನ್ ಗಳ ಅಡಿಯಲ್ಲಿ ದೂರು ದಾಖಲಾಗಿದೆ.
ಈ ಸಂಬಂಧ ವಡೋದರದ ಮಕರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಕೂಲ್ ವ್ಯಾನ್ ಚಾಲಕ ಹಾಗೂ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯದ ಚಾಲನೆಗಾಗಿ ಸೆಕ್ಷನ್ 192 ಸಿಎ ಮತ್ತು ಸೆಕ್ಷನ್ 180, 184, 336, 279 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಚಾಲಕನ ಕಲಿಕಾ ಚಾಲನಾ ಪರವಾನಗಿ ರದ್ದುಪಡಿಸುವ ಪ್ರಯತ್ನವನ್ನೂ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.