ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ.18:
ನಗರದ ವೀರಶೈವ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆಯನ್ನು ಘೋಷಿಸಲಾಗಿದ್ದು, ಹಾಲಿ ಆಡಳಿತ ರೂಢ ಮಂಡಳಿಯ ನಿರ್ದೇಶಕರು ಪುನರ್ ಆಯ್ಕೆಯನ್ನು ಬಯಸಿ ಗುರುವಾರ ಪಟೇಲ್ ಶಿವಕುಮಾರ್ ಅವರ ಬೆಂಬಲಿಗರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಮುನ್ನ ನಗರದ ನೀಲಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮೆರವಣಿಗೆಯ ಮೂಲಕ ಬ್ಯಾಂಕ್‌ಗೆ ತೆರಳಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಾಯಿತು. ಈ ವೇಳೆ ಬೆಂಬಲಿಗರು, ಅಭಿಮಾನಿಗಳು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು, ಅಭ್ಯರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿದರು.
ವೀರಶೈವ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ನಗರದ ವ್ಯಾಪಾರ ಹಾಗೂ ಬ್ಯಾಂಕಿಂಗ್ ವಲಯದಲ್ಲಿ ಈ ಚುನಾವಣೆ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.
Views: 58