ವೀರಶೈವ-ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ.

ವರದಿ ಮತ್ತು ಪೋಟೋ ಸುರೇಶ್

ಚಿತ್ರದುರ್ಗ ಜು. 18

ವೀರಶೈವ ಸಮಾಜ (ರಿ)ವತಿಯಿಂದ  2024-25ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ. 90ಗಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವೀರಶೈವ-ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವೂ ಜಿ. 20ರ ಭಾನುವಾರ ನಗರದ ಪಂಚಚಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು  ಕಾರ್ಯದರ್ಶಿಗಳಾದ ಪಿ.ವಿರೇಂದ್ರ ಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾ. ಬಸವ ಪ್ರಭು ಸ್ವಾಮೀಜಿ ದಾವಣಗೆರೆ ವಿರಕ್ತ ಮಠದ ಪೀಠಾಧ್ಯಕ್ಷರಾದ ಡಾ. ಬಸವ ಪ್ರಭು ಸ್ವಾಮೀಜಿ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಮತ್ತು ಶ್ರೀ ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ವಹಿಸಲಿದ್ದಾರೆ. 

ಕಾರ್ಯಕ್ರಮವನ್ನು ಶಾಸಕರಾದ ಕೆ.ಸಿ.ವಿರೇಂದ್ರ ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ವೀರಶೈವ ಸಮಾಜ (ರಿ.)ದ ಅಧ್ಯಕ್ಷರಾದ ಹೆಚ್.ಎನ್. ತಿಪ್ಪೇಸ್ವಾಮಿ ವಹಿಸಲಿದ್ದಾರೆ. ್ಯ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಕೆ.ಡಿ.ಪಿ. ಸದಸ್ಯರು ಹಾಗೂ ವೀರಶೈವ ಸಮಾಜ (ರಿ.)ದ ಉಪಾಧ್ಯಕ್ಷರಾದ ಕೆ.ಸಿ. ನಾಗರಾಜ್ ಭಾಗವಹಿಸಲಿದ್ದಾರೆ.    ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ. ಗಂಗಾಧರ ಪಿ.ಎಸ್. ಉಪನ್ಯಾಸ ನೀಡಲಿದ್ದಾರೆ.   

Leave a Reply

Your email address will not be published. Required fields are marked *