IPL 2024 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ IPL 2024 ರಲ್ಲಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ RCB.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಗ್ಗರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿ ನಿಂತಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.25) ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು ಎದುರಿಸಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಗ್ಗರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿ ನಿಂತಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.25) ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು ಎದುರಿಸಲಿದೆ.
ಇತ್ತ ತವರಿನಲ್ಲಿ ಪಂದ್ಯ ನಡೆಯುತ್ತಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆಯಾ? ಎಂಬ ಪ್ರಶ್ನೆಗೆ ಉತ್ತರ ಸ್ಪಷ್ಟ.. ನೋ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಗೆದ್ದಿದ್ದಕ್ಕಿಂತ ಸೋತಿರುವುದೇ ಜಾಸ್ತಿ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ತಂಡವು ಇದುವರೆಗೆ 84 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 39 ಮ್ಯಾಚ್ಗಳಲ್ಲಿ ಮಾತ್ರ. ಇನ್ನು 40 ಪಂದ್ಯಗಳಲ್ಲಿ ಸೋಲನುಭವಿಸಿದೆ. ಹಾಗೆಯೇ 4 ಪಂದ್ಯಗಳು ಕಾರಣಾಂತರಗಳಿಂದ ಫಲಿತಾಂಶರಹಿತವಾಗಿತ್ತು.
ಅಂದರೆ ಆರ್ಸಿಬಿ ತಂಡದ ತವರು ಮೈದಾನದಲ್ಲಿ ಎದುರಾಳಿ ತಂಡ ಕೂಡ ಶೇ.50 ರಷ್ಟು ಗೆಲುವಿನ ಸರಾಸರಿ ಹೊಂದಿದೆ. ಹೀಗಾಗಿಯೇ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲ್ಲುವುದು ಕೂಡ ಅಂದುಕೊಂಡಷ್ಟು ಸುಲಭವಲ್ಲ.
ಅತ್ತ ಪಂಜಾಬ್ ಪಡೆಯಲ್ಲಿ ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಸಿಕಂದರ್ ರಾಝ ಅವರಂತಹ ಸ್ಟಾರ್ ಆಲ್ರೌಂಡರ್ಗಳ ದಂಡೇ ಇದ್ದು, ಈ ಆಟಗಾರರು ಯಾವುದೇ ಹಂತದಲ್ಲೂ ಪಂದ್ಯದ ಗತಿಯನ್ನೇ ಬದಲಿಸಬಲ್ಲರು. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂಜಾಬ್ ಕಡೆಯಿಂದ ಪರಾಕ್ರಮ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.
ಇನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಭಯ ತಂಡಗಳು ಇದುವರೆಗೆ 11 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ 6 ಪಂದ್ಯಗಳಲ್ಲಿ ಆರ್ಸಿಬಿ ಜಯ ಸಾಧಿಸಿದರೆ, 5 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸುವಲ್ಲಿ ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಪಂಜಾಬ್ ಪಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಪ್ರಭ್ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಸಿಕಂದರ್ ರಾಝ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೈಡೆ, ಅರ್ಷ್‌ದೀಪ್ ಸಿಂಗ್, ನಾಥನ್ ಎಲ್ಲಿಸ್, ಸ್ಯಾಮ್ ಕರನ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ರಾಹುಲ್ ಚಹರ್ , ಹರ್‌ಪ್ರೀತ್ ಭಾಟಿಯಾ, ವಿದ್ವತ್ ಕಾವೇರಪ್ಪ, ಶಿವಂ ಸಿಂಗ್, ಹರ್ಷಲ್ ಪಟೇಲ್, ಕ್ರಿಸ್ ವೋಕ್ಸ್, ಅಶುತೋಷ್ ಶರ್ಮಾ, ವಿಶ್ವನಾಥ್ ಪ್ರತಾಪ್ ಸಿಂಗ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್, ರೈಲಿ ರೊಸ್ಸೊವ್. ರಾಯಲ್ ಚಾಲೆಂಜರ್ಸ್
ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌ ಹಾಣ್.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1