Video: ಎಕ್ಸ್ ಪ್ರೆಸ್ ವೇ ಅಪಘಾತ, ಗಾಳಿಯಲ್ಲಿ ಹಾರಿದ ಮಹಿಳೆ ಸಾವು, ಚಾಲಕನ ವಿರುದ್ಧ HIT and RUN Case!

ಚಿತ್ರದುರ್ಗದ ಎಕ್ಸ್‌ಪ್ರೆಸ್‌ವೇ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ: ಕುಟುಂಬ ಸಮೇತ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಢಿಕ್ಕಿಯಾದ ಪರಿಣಾಮ ಮಹಿಳೊಯೊಬ್ಬರು 10 ಅಡಿಗೂ ಹೆಚ್ಚು ಎತ್ತರಕ್ಕೆ ಹಾರಿ ಬಿದ್ದು ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ನಡೆಸಿದೆ.

ಚಿತ್ರದುರ್ಗದ ಎಕ್ಸ್‌ಪ್ರೆಸ್‌ವೇ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದ್ದು, ಸ್ಥಳದಲ್ಲೇ ಆಕೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

30 ಸೆಕೆಂಡುಗಳ ಸಿಸಿಟಿವಿ ಕ್ಲಿಪ್‌ನಲ್ಲಿ ಚಿತ್ರದುರ್ಗದ ಎಕ್ಸ್‌ಪ್ರೆಸ್‌ವೇ ನಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಆಕೆಗೆ ಢಿಕ್ಕಿಯಾಗಿದ್ದು, ಕಾರು ಢಿಕ್ಕಿಯಾದ ರಭಸಕ್ಕೆ ಮಹಿಳೆ ಸುಮಾರು 10 ಅಡಿಗಳಷ್ಚು ಮೆಲಕ್ಕೆ ಹಾರಿ ಸುಮಾರು 20 ಅಡಿಗಳಷ್ಟು ದೂರದಲ್ಲಿ ಬಿದಿದ್ದಾರೆ. ಕೆಳಕ್ಕೆ ಬಿದ್ದ ರಭಸಕ್ಕೆ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೀಡಿಯೊದಲ್ಲಿ ಮತ್ತೊಬ್ಬ ವ್ಯಕ್ತಿ ಆಕೆಯನ್ನು ಪರೀಕ್ಷಿಸಲು ಧಾವಿಸುತ್ತಿರುವುದನ್ನು ತೋರಿಸಲಾಗಿದೆ.

ಮಹಿಳೆ ಮತ್ತು ಮಕ್ಕಳು ಹೆದ್ದಾರಿಯ ವಿಭಜಕದಿಂದ ಎರಡನೇ ಲೇನ್ ತಲುಪಿದಾಗ ಕಾರು ಅವರಿಗೆ ಡಿಕ್ಕಿ ಹೊಡೆದು ಅತಿ ವೇಗದಲ್ಲಿ ಪರಾರಿಯಾಗಿದೆ. ಡಿಕ್ಕಿಯಾಗುತ್ತಿದ್ದಂತೆಯೇ ಮಹಿಳೆ ಗಾಳಿಯಲ್ಲಿ ಹಾರಿ ಮೂರು ಲೇನ್‌ಗಳ ದೂರದಲ್ಲಿ ನೆಲಕ್ಕೆ ಬಿದ್ದಿದ್ದು, ಆಕೆಯನ್ನು ಹಿಂಬಾಲಿಸುತ್ತಿದ್ದ ಇನ್ನೊಬ್ಬ ಮಹಿಳೆ ಮತ್ತು ಮಕ್ಕಳು ಸಾವಿನಿಂದ ಪಾರಾಗಿದ್ದಾರೆ. ಢಿಕ್ಕಿ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪೊಲೀಸ್ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಕಾರು ಮತ್ತು ಚಾಲಕನನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಕಾರು ಢಿಕ್ಕಿಯಾದ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

Source : https://www.kannadaprabha.com/karnataka/2025/Feb/25/video-woman-flung-into-air-dies-on-spot-after-hit-and-run-in-karnataka

Leave a Reply

Your email address will not be published. Required fields are marked *