ಚಿತ್ರದುರ್ಗ, ಸೆ. 27:
ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಚಿತ್ರದುರ್ಗ ಹೋಟೆಲ್ ಅಸೋಸಿಯೇಷನ್ ವತಿಯಿಂದ ನಗರದ ಐತಿಹಾಸಿಕ ಚಿತ್ರದುರ್ಗ ಕೋಟೆಯ ಮುಂಭಾಗದಲ್ಲಿ ಪ್ರವಾಸಿಗರಿಗೆ ಕುಡಿಯುವ ನೀರಿನ ಬಾಟಲ್ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಚಿತ್ರದುರ್ಗ ಕೋಟೆಗೆ ಪ್ರತಿದಿನ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಕೋಟೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಕುಡಿಯುವ ನೀರನ್ನು ಒದಗಿಸುವ ಮೂಲಕ ಆತಿಥ್ಯ ಹಾಗೂ ಕಾಳಜಿ ತೋರುವ ಉದ್ದೇಶದಿಂದ ಹೋಟೆಲ್ ಅಸೋಸಿಯೇಷನ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಪ್ರವಾಸೋದ್ಯಮವು ಕೇವಲ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸೀಮಿತವಾಗಿರದೆ, ಪ್ರವಾಸಿಗರಿಗೆ ಉತ್ತಮ ಆತಿಥ್ಯ, ಸ್ವಚ್ಛತೆ, ಸುರಕ್ಷತೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದನ್ನೂ ಒಳಗೊಂಡಿದೆ. ಚಿತ್ರದುರ್ಗಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸ್ಥಳೀಯ ಆಡಳಿತ, ಹೋಟೆಲ್ ಉದ್ಯಮ, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಕಾರ್ಯನಿರ್ವಹಿಸಬೇಕಿದೆ. ಜಿಲ್ಲೆಯ ಐತಿಹಾಸಿಕ ಕೋಟೆ, ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪತ್ತನ್ನು ಸಂರಕ್ಷಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ಈ ಸಂದರ್ಭದಲ್ಲಿ ಸಾರಲಾಯಿತು.
ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಚಿತ್ರದುರ್ಗಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರವಾಸಿಗರಿಗೂ ಉತ್ತಮ ಅನುಭವ ನೀಡುವ ಸಂಕಲ್ಪವನ್ನು ಚಿತ್ರದುರ್ಗ ಹೋಟೆಲ್ ಅಸೋಸಿಯೇಷನ್ ವ್ಯಕ್ತಪಡಿಸಿತು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮಂಜುನಾಥ್ ರೆಡ್ಡಿ, ಚಿತ್ರದುರ್ಗ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಕೆ.ಎಸ್. ಅರುಣ್ ಕುಮಾರ್, ಉಪಾಧ್ಯಕ್ಷ ದೀಪಾನಂದ್ ಉಪಾಧ್ಯ, ನಿರ್ದೇಶಕರಾದ ವಿಕ್ರಮ್ ಉಪಾಧ್ಯ, ಶರಣ್ ಕುಮಾರ್, ಸಂಘಟನಾ ಕಾರ್ಯದರ್ಶಿ ಜೆ.ವಿ. ಸಿದ್ದೇಶ್, ಅನ್ನಪೂರ್ಣೇಶ್ವರಿ ಹೋಟೆಲ್ನ ಬದ್ರಿ, ಮಹೇಶ್, ಸಿದ್ದೇಶ್ ರೆಡ್ಡಿ, ವೇಣು, ಶ್ರೀಪಾದ, ಮುರುಗೇಶ್, ಸೃಜನ್ ಎಸ್.ಬಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j