ಅಕ್ಟೋಬರ್ ನಲ್ಲಿ ಧಾರವಾಡದಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಟೂರ್ನಿ,  ವಿಶ್ವದ ದಿಗ್ಗಜ ಆಟಗಾರರ ಆಟಕ್ಕೆ ಸಾಕ್ಷಿಯಾಗಲಿದೆ ವಿದ್ಯಾ ಕಾಶಿ..!

ಅಂತರಾಷ್ಟ್ರೀಯ ಟೆನ್ನಿಸ್ ಫೆಡರೇಷನ್ ಮತ್ತು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಜಂಟಿಯಾಗಿ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದಲ್ಲಿ ಬರುವ ಅಕ್ಟೋಬರ್ ತಿಂಗಳಿನಲ್ಲಿ ಧಾರವಾಡದಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ವಿಶ್ವದ ನಾನಾ ದೇಶಗಳ ಶ್ರೇಯಾಂಕಿತ ಟೆನ್ನಿಸ್ ಆಟಗಾರರು ಭಾಗವಹಿಸಲಿದ್ದಾರೆ.

ಧಾರವಾಡ: ಅಂತರಾಷ್ಟ್ರೀಯ ಟೆನ್ನಿಸ್ ಫೆಡರೇಷನ್ ಮತ್ತು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಜಂಟಿಯಾಗಿ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದಲ್ಲಿ ಬರುವ ಅಕ್ಟೋಬರ್ ತಿಂಗಳಿನಲ್ಲಿ ಧಾರವಾಡದಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ವಿಶ್ವದ ನಾನಾ ದೇಶಗಳ ಶ್ರೇಯಾಂಕಿತ ಟೆನ್ನಿಸ್ ಆಟಗಾರರು ಭಾಗವಹಿಸಲಿದ್ದಾರೆ.

ಇದರ ಅಂಗವಾಗಿ ಟೆನ್ನಿಸ್ ಕ್ರೀಡಾ ಆಸಕ್ತರಿಗೆ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್‍ದ ಆಜೀವ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ಟೆನ್ನಿಸ್ ಕೋರ್ಟ್ ಸುಮಾರು 96 ವರ್ಷಗಳ ಐತಿಹಾಸಕತೆಯನ್ನು ಹೊಂದಿದೆ. ಐದು ಸಿಂಥೆಟಿಕ್ ಯುಎಸ್‍ಟಿಎ ಶ್ರೇಣಿಯ ಟೆನ್ನಿಸ್ ಕೋರ್ಟ್ ಹೊಂದಿದೆ. ಮತ್ತು ಅತ್ಯಾಧುನಿಕ ಸೌಲಭ್ಯವುಳ್ಳ ಸುಸಜ್ಜಿತ ಜಿಮ್ ಹಾಗೂ ಟೆನ್ನಿಸ್ ಉತ್ತಮ ತರಬೇತಿದಾರರನ್ನು ಹೊಂದಿದೆ. ಇಲ್ಲಿನ ಟೆನ್ನಿಸ್ ಕೋರ್ಟ್ ಅಂತರಾಷ್ಟ್ರೀಯ ಗುಣಮಟ್ಟದ್ದಾಗಿದೆ.

ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್‍ದ ಆಜೀವ ಸದಸ್ಯತ್ವ ಪಡೆಯಲು ಸೆಪ್ಟೆಂಬರ್ 15 ರಿಂದ 22 ರ ವರೆಗೆ ಸೀಮಿತ ಕಾಲಾವಕಾಶವನ್ನು ನೀಡಲಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಸದಸ್ಯತ್ವ ಶುಲ್ಕದೊಂದಿಗೆ ಆಸಕ್ತರು ಸದಸ್ಯತ್ವ ಪಡೆಯಬಹುದು.

ಸಂಪರ್ಕಕ್ಕಾಗಿ ಸಂದೀಪ ಬಣವಿ, ಕಾರ್ಯದರ್ಶಿಗಳು, ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್, ಡಿ.ಸಿ. ಕಂಪೌಂಡ, ಧಾರವಾಡ ಮೊ.ಸಂ: 9448460955, 6361398510 ಗೆ ಸಂಪರ್ಕಿಸಬಹುದು. ಟೆನ್ನಿಸ್ ಕಚೇರಿಗೆ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ಭೇಟ್ಟಿ ನೀಡಿ ಅರ್ಜಿ ಸಲ್ಲಿಸಬಹುದೆಂದು ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ: https://chat.whatsapp.com/KnDIfiBURQ9G5sLEJLqshk

ನಮ್ಮ Facebook page: https://www.facebook.com/samagrasudii

Source : https://zeenews.india.com/kannada/sports/international-tennis-tournament-in-dharwad-in-october-vidya-kashi-will-witness-the-game-of-world-famous-players-158271

Leave a Reply

Your email address will not be published. Required fields are marked *