ಚಿತ್ರದುರ್ಗ: ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾಸಂಸ್ಥೆಯ ಐಸಿಎಸ್‌ಇ ವಿಭಾಗದ ವಿದ್ಯಾರ್ಥಿ ಹರ್ಷವರ್ಧನ್.ಎಸ್ ಅವರು ರಾಜ್ಯಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಭಾಗವಹಿಸಿ ಬಹುಮಾನ ಗಳಿಸುವ ಮೂಲಕ ರಾಷ್ಟ್ರಮಟ್ಟದ ‘ಇನ್‌ಸ್ಪೈರ್ ಅವಾರ್ಡ್ ಮಾನಕ್‘ ವಿಜ್ಞಾನ ವಸ್ತುಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ.
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ರಾಷ್ಟ್ರೀಯ ಇನ್ನೋವೇಷನ್ ಫೌಂಡೇಶನ್ ಸಹಯೋಗದಲ್ಲಿ ಅಕ್ಟೋಬರ್ 9ರಿಂದ 15ರವರೆಗೆ ನವದೆಹಲಿಯಲ್ಲಿ ರಾಷ್ಟ್ರಮಟ್ಟದ ವಿಜ್ಞಾನ ವಸ್ತುಪ್ರದರ್ಶನ 2026 ಆಯೋಜಿಸಲಾಗಿದೆ. ಈ ಪ್ರದರ್ಶನದಲ್ಲಿ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯನ್ನು ಪ್ರತಿನಿಧಿಸಲು ವಿದ್ಯಾ ವಿಕಾಸ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಹರ್ಷವರ್ಧನ್.ಎಸ್ ಆಯ್ಕೆಯಾಗಿರುವುದು ಶಾಲೆ ಹಾಗೂ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.
ಹರ್ಷವರ್ಧನ್ ಅವರು ರಾಜ್ಯಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ‘ಕೃಷಿ 2.0 ಬಹುಪಯೋಗಿ ಆಧುನಿಕ ಎತ್ತಿನ ಗಾಡಿ’ (Agriculture 2.0 Multipurpose and Modern Bullock Cart) ಎಂಬ ಶೀರ್ಷಿಕೆಯ ನವೀನ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಉಪಯುಕ್ತವಾಗುವ ಆಧುನಿಕ ತಂತ್ರಜ್ಞಾನದ ಪರಿಕಲ್ಪನೆಯನ್ನು ಒಳಗೊಂಡಿರುವ ಈ ಮಾದರಿಯ ಮೂಲಕ ರಾಷ್ಟ್ರಮಟ್ಟದ ಪ್ರದರ್ಶನಕ್ಕೆ ಆಯ್ಕೆಯಾಗಿರುವುದು ಅವರ ಪ್ರತಿಭೆ ಮತ್ತು ಸೃಜನಶೀಲತೆಗೆ ಸಾಕ್ಷಿಯಾಗಿದೆ.

ವಿದ್ಯಾರ್ಥಿಯ ಈ ಸಾಧನೆಗೆ ಮಾರ್ಗದರ್ಶನ ನೀಡಿದ ಶಿಕ್ಷಕರಾದ ಆಶಾ.ಸಿ.ಹೆಚ್.ಎಂ. ಮತ್ತು ಶ್ರೀನಿಧಿ ಬಿ. ಅವರ ಕೊಡುಗೆಯೂ ಶ್ಲಾಘನೀಯವಾಗಿದೆ.
ವಿದ್ಯಾರ್ಥಿ ಹರ್ಷವರ್ಧನ್.ಎಸ್ ಹಾಗೂ ಮಾರ್ಗದರ್ಶಿ ಶಿಕ್ಷಕರ ಸಾಧನೆಯನ್ನು ವಿದ್ಯಾ ವಿಕಾಸ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಬಿ. ವಿಜಯ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಎಸ್.ಎಂ. ಪೃಥ್ವೀಶ, ನಿರ್ದೇಶಕಿ ಸುನಿತಾ.ಪಿ.ಸಿ., ಐಸಿಎಸ್‌ಇ ಪ್ರಾಚಾರ್ಯರಾದ ಬೀನಾ ಎ. ಜಾನ್, ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ.ಎನ್.ಜಿ. ಸೇರಿದಂತೆ ಸಂಸ್ಥೆಯ ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿ, ರಾಷ್ಟ್ರಮಟ್ಟದ ಪ್ರದರ್ಶನದಲ್ಲಿಯೂ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j