ವಿಭಾಗ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ಶಾಲಾ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ ಗೌರವ.

ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ದಿನಾಂಕ : 06.11.2025ರ ಗುರುವಾರದಂದು ದಾವಣಗೆರೆಯಲ್ಲಿ ಆಯೋಜಿಸಿದ್ದ ವಿಭಾಗ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

17 ವರ್ಷದೊಳಗಿನ ಬಾಲಕೀಯರ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ, ವಿಭಾಗ ಮಟ್ಟದಲ್ಲಿ ಭಾಗವಹಿಸಿ ಮಮ್ಮು.ಟಿ. ಮತ್ತು ಗಗನ ಪಡ್ವಿಡಿ.ವಿ.ಎಂ ಇವರು ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಮ್ಮು.ಟಿ. ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವಿಭಾಗ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದ ಈ ಕ್ರೀಡಾಪಟುವಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್, ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸುನಿತಾ.ಪಿ.ಸಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ.ಎಸ್.ಎಂ ಪೃಥ್ವೀಶ, ಹಾಗೂ ಐಸಿಎಸ್‌ಸಿ ಪ್ರಾಚಾರ್ಯರಾದ ಬಸವರಾಜಯ್ಯ.ಪಿ, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ. ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *