ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ: ವಿಜೇತರಿಗೆ ಬಹುಮಾನ ವಿತರಣೆ
ನಗರದ ವಿದ್ಯಾದಾಯಿನಿ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ಡಾ. ಗೋಪಾಲ್ ಅವರು ಮಾತನಾಡಿ, ಮಕ್ಕಳ ದಿನಾಚರಣೆಯ ಮಹತ್ವ ಹಾಗೂ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಣದ ಪಾತ್ರದ ಕುರಿತು ವಿವರಿಸಿದರು.
ಶಾಲೆಯ ಸಿಇಒ ನಾಗರಾಜ್ ಅವರು ಕನ್ನಡ ಭಾಷೆಯ ಮಹತ್ವವನ್ನು ತಿಳಿಸುವುದರ ಜೊತೆಗೆ ಕನ್ನಡ ರಾಜ್ಯೋತ್ಸವದ ಸಂಕೇತವಾದ ಕೆಂಪು ಮತ್ತು ಹಳದಿ ಬಣ್ಣಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕರಾದ ಪ್ರತೀಕ್ ಹಾಗೂ ಝಮೀರುಲ್ಲ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು.
ಸಭಾ ಕಾರ್ಯಕ್ರಮವನ್ನು ಶ್ರೀಮತಿ ಶಶಿಕಲಾ ಅವರು ನಿರೂಪಿಸಿದರು. ಯಾಸ್ಮಿನ್ ಬಾನು ಅವರು ಸ್ವಾಗತಿಸಿದರು.
ನಂತರ ಮಕ್ಕಳ ಮನರಂಜನೆಗಾಗಿ ಶಿಕ್ಷಕರ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕರ ಸಾಂಸ್ಕೃತಿಕ ಪ್ರದರ್ಶನಗಳು ಮಕ್ಕಳಲ್ಲಿ ಸಂತಸ ಮೂಡಿಸಿದವು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲಾ ಮಕ್ಕಳಿಗೂ ಸಿಹಿ ಹಾಗೂ ಲಘು ಉಪಹಾರವನ್ನು ವಿತರಿಸಲಾಯಿತು.
ಮಕ್ಕಳಲ್ಲಿ ಕನ್ನಡ ಭಾಷೆ, ನಾಡು-ನುಡಿಯ ಅಭಿಮಾನ ಬೆಳೆಸುವುದರ ಜೊತೆಗೆ ಅವರ ಪ್ರತಿಭೆ ಮತ್ತು ಸೃಜನಶೀಲತೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು