ಅನುಪಮ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜೂನ್ 13 ರಂದು ಪೂರ್ವ ಪ್ರಾಥಮಿಕ ಹಂತದ ಮಕ್ಕಳಿಗೆ ವಿದ್ಯಾರಂಭಂ-2024 ನ್ನು ಸಂಭ್ರಮದಿಂದ ಆಚರಿಸಲಾಯಿತು.

2024-25 ರ ಶೈಕ್ಷಣಿಕ ವರ್ಷದ ಆರಂಭದಲ್ಲಿ ಪೂರ್ವಪ್ರಾಥಮಿಕ ಹಂತದ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿ ಪೋಷಕರೊಂದಿಗೆ ಉತ್ಸಾಹ, ಆಸಕ್ತಿ ಮತ್ತು ಸಂಭ್ರಮದಿಂದ ಪಾಲ್ಗೊಂಡು ಅಕ್ಷರಗಳನ್ನು ಬರೆಯುವುದರ ಮೂಲಕ ತಮ್ಮ ವಿದ್ಯಾರ್ಥಿ ಜೀವನದ ಮೊದಲ ಅಕ್ಷರವನ್ನು ಕಲಿಯಲು ಪ್ರಾರಂಭಿಸಿದರು.

ಈ ಸಂದರ್ಭದಲ್ಲಿ ಅನುಪಮ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷರಾದ ಭಾಸ್ಕರ್. ಎಸ್. ಕಾರ್ಯದರ್ಶಿಗಳಾದ ರಕ್ಷಣ್, ಎಸ್.ಬಿ. ಪ್ರಾಂಶುಪಾಲರಾದ ಸಂಪತ್ ಕುಮಾರ್, ಸಿ.ಡಿ. ಮುಖ್ಯೋಪಾಧ್ಯಾಯರು ಮತ್ತು ಶಾಲೆಯ ಶಿಕ್ಷಕ/ ಶಿಕ್ಷಕಿಯರು ಭಾಗವಹಿಸಿದ್ದರು.