Vijayanagar : ಶ್ರೀ ಕೊಟ್ಟೂರೇಶ್ವರ ಜಾತ್ರೆ ಹಿನ್ನೆಲೆ ವಿಶೇಷ ರೈಲು ವ್ಯವಸ್ಥೆ.

ಈ ಹಿನ್ನೆಲೆಯಲ್ಲಿ ಜನದಟ್ಟಣೆ ಕಡಿಮೆ ಮಾಡುವ ಹಿನ್ನೆಲೆಯಲ್ಲಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಹೊಸಪೇಟೆ-ಬಳ್ಳಾರಿ-ಕೊಟ್ಟೂರು-ದಾವಣಗೆರೆ ಮಾರ್ಗವಾಗಿ ವಿಶೇಷ ರೈಲು ಸಂಚಾರ ಸೇವೆ ನೀಡಲು ನೈರುತ್ಯ ರೈಲು ನಿರ್ಧರಿಸಿದ್ದು, ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಶ್ರೀ ಗುರುಬಸವೇಶ್ವರಸ್ವಾಮಿ ದೇವಾಲಯದ ವಾರ್ಷಿಕ ರಥೋತ್ಸವದ ಅಂಗವಾಗಿ ಫೆಬ್ರವರಿ 29ರಿಂದ ಮಾರ್ಚ್‌ 5ರವರೆಗೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ.

ಬಳ್ಳಾರಿ ಹಾಗೂ ದಾವಣಗೆರೆ ಮಾರ್ಗದಲ್ಲಿ ಸಂಚರಿಸುವ ಈ ರೈಲು ತೋರಣಗಲ್ಲು, ಹೊಸಪೇಟೆ, ಹುಬ್ಬಳ್ಳಿ, ಕೊಟ್ಟೂರು ಹಾಗೂ ಅಮರಾವತಿ ನಿಲ್ದಾಣಗಳಲ್ಲಿ ಪ್ರಯಾಣಿಕರು ಹತ್ತಲು ಅವಕಾಶವಿದೆ. ಫೆಬ್ರವರಿ 29ರಿಂದ ಮಾರ್ಚ್‌ 5ರವರೆಗೆ ಪ್ರತಿ ನಿತ್ಯವು ಬಳ್ಳಾರಿ-ದಾವಣಗೆರೆ ವಿಶೇಷ ರೈಲು ಆರು ಬಾರಿ ಇದೇ ಮಾರ್ಗದಲ್ಲಿ ಸಂಚಾರ ಮಾಡಲಿದೆ.

ರಥೋತ್ಸವದ ಅಂಗವಾಗಿ 29/2/2024 ರಿಂದ 10/3/2024ರ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು, ಪ್ರತಿನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಲಿದ್ದಾರೆ. ಫೆಬ್ರವರಿ 29ರಂದು ಬೆಳ್ಳಿ ರಥದಲ್ಲಿ ನಾಗರ ವಾಹನೋತ್ಸವ, ಮಾರ್ಚ್ 1ರಂದು ಬೆಳ್ಳಿ ರಥದಲ್ಲಿ ನವಿಲು ವಾಹನೋತ್ಸವ, ಮಾರ್ಚ್ 2ರಂದು ಬೆಳ್ಳಿ ರಥದಲ್ಲಿ ಗಜವಾಹನೋತ್ಸವ, ಮಾರ್ಚ್ 3ರಂದು ಬೆಳ್ಳಿ ರಥದಲ್ಲಿ ವೃಷಭ ವಾಹನೋತ್ಸವ ನಡೆಯಲಿದೆ.

ಪ್ರತಿ ವರ್ಷ ಜಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲಾಡಳಿತ ಕೊಟ್ಟೂರು ಪಟ್ಟಣ ವ್ಯಾಪ್ತಿಯಲ್ಲಿ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಆದೇಶಿಸುತ್ತದೆ. ಈ ಬಾರಿಯೂ ಇದೇ ನಿಯಮ ಮುಂದುವರಿಯುವ ಸಾಧ್ಯತೆ ಇದೆ.

ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿರುವ ಶ್ರೀ ಗುರುಬಸವೇಶ್ವರಸ್ವಾಮಿ ದೇವಾಲಯದ ವಾರ್ಷಿಕ ರಥೋತ್ಸವ 4/3/2024ರಂದು ನಡೆಯಲಿದೆ.ಶ್ರೀ ಗುರುಬಸವೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಮತ್ತು ಬೆಳ್ಳಿ ರಥೋತ್ಸವ ಎಂದೇ ಕೊಟ್ಟೂರು ಜಾತ್ರೆ ಪ್ರಸಿದ್ಧಿ ಪಡೆದಿದೆ.ಮಾರ್ಚ್‌ 4ರಂದು ಶ್ರೀ ಸ್ವಾಮಿಯ ಮಹಾ ರಥೋತ್ಸವ ನಡೆಯಲಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *