ವಿನಯಕುಮಾರ್ ಸೂರಕೆ ಚಿತ್ರದುರ್ಗ ಭೇಟಿ: ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆ ಸೆ.11ರಂದು.

ಚಿತ್ರದುರ್ಗ ಸೆ. 10

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್


ಮಾಜಿ ಸಚಿವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೂರಕೆಯವರು ಸೆ. 11ರ ಗುರುವಾರ ಚಿತ್ರದುರ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್ ತಿಳಿಸಿದ್ದಾರೆ.


ಸೆ.11ರ ಗುರುವಾರ ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಪಕ್ಷದ ಎಲ್ಲಾ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕರ್ತರು, ಜಿ.ಪಂ. ತಾ.ಪಂ.ಮಾಜಿ ಸದಸ್ಯರು, ನಗರಸಭೆಯ ಹಾಲಿ ಸದಸ್ಯರುಗಳು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *