

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಏ. 08 : ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಆರೋಪಿಗಳ ರಾಜಕೀಯ ಸ್ಥಾನಮಾನ ಲೆಕ್ಕಿಸದೆ ಅವರನ್ನು ಕಾನೂನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಜಿಲ್ಲಾ ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದೆ.
ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ್ ಬೇದ್ರೆ ಹೇಳಿಕೆ ನೀಡಿ, ವಿನಯ್ ಸೋಮಯ್ಯ ಅವರು ಕಾಂಗ್ರೆಸ್ ಆಡಳಿತದ ಸೇಡಿನ ಕ್ರಮಕ್ಕೆ ಬಲಿಯಾಗಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ದಬ್ಬಾಳಿಕೆಯ ವಾತಾವರಣದ ಸ್ಪಷ್ಟ ಬಿಂಬ.ಕಾಂಗ್ರೆಸ್ ಸರ್ಕಾರವು ದ್ವೇಷ, ಬೆದರಿಕೆ ಮತ್ತು ಭಯದಲ್ಲಿ ಬೇರೂರಿರುವ ಅಪಾಯಕಾರಿ ರಾಜಕೀಯವನ್ನು ಮುಂದುವರೆಸಿದೆ. ಆಡಳಿತದ ವೈಫಲ್ಯಗಳನ್ನು ಪ್ರಶ್ನಿಸಲು ಅಥವಾ ಬಹಿರಂಗಪಡಿಸಲು ಧೈರ್ಯ ಮಾಡುವ ಯಾರನ್ನಾದರೂ ಗುರಿಯಾಗಿಸಲಾಗುತ್ತದೆ ಎಂದು ಆರೋಪಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾಗಿರುವ ಅಲ್ಲಿನ ಕಾಂಗ್ರೆಸ್ ಶಾಸಕರ ಹೆಸರನ್ನು ವಿನಯ್ ಸೋಮಯ್ಯ ಡೆತ್ ನೊಟ್‍ನಲ್ಲಿ
ಉಲ್ಲೇಖಿಸಿದ್ದಾರೆ.ಇದರ ಆಧಾರದ ಮೇಲೆ ಅವರನ್ನು ಬಂಧಿಸಿ ವಿಚಾರಣೆ ನಡೆಸಿ, ತಪ್ಪಿದ್ದರೆ ಶಿಕ್ಷೆ ವಿಧಿಸಬೇಕು. ಬಿಜೆಪಿಯ
ಪ್ರಾಮಾಣಿಕ ಕಾರ್ಯಕರ್ತನನ್ನು ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬೆದರಿಕೆ ಹಾಗೂ ಒತ್ತಡ ಹೇರಿರುವುದು ಅತ್ಯಂತ
ಖಂಡನೀಯ. ಬೆದರಿಕೆ ಮೂಲಕ ಬಿಜೆಪಿ ಕಾರ್ಯಕರ್ತರ ಧೈರ್ಯ ಕುಗಿಸುವ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯವರು ಬಗ್ಗುವುದಿಲ್ಲ
ಎಂದಿರುವ ನಾಗರಾಜ್ ಬೇದ್ರೆ ಅವರ ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ 25ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ದುಷ್ಕರ್ಮಿಗಳ
ದ್ವೇಷದಿಂದ ಹತ್ಯೆ ಮಾಡಿದ್ದಾರೆ ಎಂದು ದೂರಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1